About Us Advertise with us Be a Reporter E-Paper

Breaking Newsದೇಶ
Trending

ಎರಡು ಗುಂಪುಗಳ ನಡುವೆ ಫೈರಿಂಗ್, ಮೂವರು ಸಾವು

ಲಖನೌ: ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌದ ಶಹಜಹಾನ್​ಪುರ ಜಿಲ್ಲೆಯಲ್ಲಿ ನಡೆದಿದೆ.

ಆವಾಸ್‌ ವಿಕಾಲ್‌ ಕಾಲನಿಯಲ್ಲಿ ಗುರುವಾರ ರಾತ್ರಿ 8.30ರ ಸುಮಾರಿಗೆ ಎರಡು ಗುಂಪುಗಳ ನಡುವೆ ವಾಗ್ವಾದ ಉಂಟಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ನಾಲ್ವರಿಗೆ ಗುಂಡು ತಗುಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಅವರಲ್ಲಿ ಸೋದರರಾದ ಇಸ್ರಾರ್‌ ಮತ್ತು ಇಮ್ರಾನ್‌ ಸ್ಥಳದಲ್ಲಿಯೇ ಮೃತಪಟ್ಟರೆ, ಮುಷೀರ್‌ ಎಂಬಾತ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ರಾಹುಲ್‌ ಅಕ ಸೋನು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close