About Us Advertise with us Be a Reporter E-Paper

Breaking Newsದೇಶಪ್ರಚಲಿತ

ಜಲಪ್ರಳಯಕ್ಕೆ ಕೇರಳದಲ್ಲಿ 483 ಮಂದಿ ಬಲಿ: ಪಿಣರಾಯಿ ವಿಜಯನ್

ತಿರುವನಂತಪುರ: ಮಳೆ, ಭೂಕುಸಿತದಿಂದಾಗಿ ಸುಮಾರು 483 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಅಲ್ಲದೆ 140 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ.

ಕೇರಳದಲ್ಲಿ ವಿಶೇಷ ಅಧಿವೇಶನ ಕರೆಯಲಾಗಿದ್ದು, ಮಳೆಯಿಂದಾಗಿ ರಾಜ್ಯಕ್ಕಾಗಿರುವ ಹಾನಿಯ ಬಗ್ಗೆ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ. ಪ್ರವಾಹ ಹಾಗೂ ಭೂಕುಸಿತದಿಂದ ರಾಜ್ಯಕ್ಕೆ ಭಾರಿ ನಷ್ಟವುಂಟಾಗಿದೆ. ಇದು ಕೇರಳದ ವಾರ್ಷಿಕ ಯೋಜನಾ ವೆಚ್ಚವನ್ನೂ ಮೀರಿದೆ ಎಂದು ಹೇಳಿದರು.

ಇನ್ನು ಪ್ರವಾಹದಿಂದ ಸಂಕಷ್ಟದಲ್ಲಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ತಮ್ಮ ಜೀವವನ್ನೂ ಪಣಕ್ಕಿಟ್ಟು ಹಲವು ಮಂದಿ ರಕ್ಷಣೆ ಮಾಡಿದ್ದಾರೆ. ಅವರೆಲ್ಲರಿಗೂ ನನ್ನ ಸೆಲ್ಯೂಟ್ ಎಂದು ಪಿಣರಾಯಿ ಹೇಳಿದರು. ಇದೀಗ ರಕ್ಷಣಾ ಕಾರ್ಯಾಚರಣೆ ಎಲ್ಲವೂ ಮುಗಿದಿದೆ. ಪುನರ್ವಸತಿ ಹಾಗೂ ಕೇರಳವನ್ನು ನಾವು ಮತ್ತೆ ಕಟ್ಟಬೇಕಾಗಿದೆ ಎಂದು ತಮ್ಮ ಭಾಷಣದಲ್ಲಿ ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close