ಭಾರತೀಯ ವಿಮಾನಗಳಿಗೆ ವಾಯುಪ್ರದೇಶ ಮುಚ್ಚಿದ ಪಾಕ್
ಪಹಲ್ಗಾಮ್ ದುರಂತ (Pahalgam attack) ನಂತರ ಭಾರತ ಸರ್ಕಾರ ಕೈಗೊಂಡ ಕ್ರಮಗಳಿಗೆ ಪ್ರತಿಯಾಗಿ ಪಾಕಿಸ್ತಾನವು ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಹೀಗಾಗಿ ಸೇವೆಯಲ್ಲಿ ಅಡಚಣೆ ಉಂಟಾಗಲಿದೆ ಎಂದು ಇಂಡಿಗೋ ಮತ್ತು ಏರ್ ಇಂಡಿಯಾ ಪ್ರಯಾಣಿಕರಿಗೆ ತಿಳಿಸಿದೆ. ವಿಮಾನ ಮಾರ್ಗಗಳನ್ನು ಬದಲಾಯಿಸಬೇಕಾಗಿರುವುದರಿಂದ "ಪರ್ಯಾಯ ವಿಸ್ತೃತ ಮಾರ್ಗ" ಕ್ಕೆ ಕಾರಣವಾಗುವ ಕೆಲವು ಅಂತಾರಾಷ್ಟ್ರೀಯ ವಿಮಾನಗಳ ವೇಳಾಪಟ್ಟಿಯ ಮೇಲೆ ಇದು ಪರಿಣಾಮ ಬೀರುತ್ತದೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.