ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪಾಕ್‌ ಮೇಲೆ ಸೇಡು ತೀರಿಸಿಕೊಳ್ತಾ ಬಲೂಚಿಸ್ತಾನ? ನಮಾಜ್‌ ಮಾಡುತ್ತಿದ್ದವರನ್ನೇ ಟಾರ್ಗೆಟ್‌ ಮಾಡಿದ್ಯಾಕೆ?

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಕನಿಷ್ಠ 69 ಜನರು ಸಾವನ್ನಪ್ಪಿದ್ದು, 169 ಕ್ಕೂ ಜನರು ಗಾಯಗೊಂಡಿದ್ದಾರೆ. ಸ್ಫೋಟದ ಬಳಿಕ ಪೊಲೀಸ್ ತಂಡಗಳು ಮತ್ತು ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆ ಆರಂಭಿಸಿದರು. ಸ್ಫೋಟದಲ್ಲಿ 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನದಲ್ಲಿ ನಡೆದ ದಾಳಿ ಹಿಂದಿನ ಮಾಸ್ಟರ್‌ ಮೈಂಡ್‌ ಯಾರು?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Feb 6, 2026 5:45 PM

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಕನಿಷ್ಠ 69 ಜನರು ಸಾವನ್ನಪ್ಪಿದ್ದು, 169 ಕ್ಕೂ ಜನರು ಗಾಯಗೊಂಡಿದ್ದಾರೆ. ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರ ಎರಡು ದಿನಗಳ ಅಧಿಕೃತ ಭೇಟಿಯ ಸಂದರ್ಭದಲ್ಲಿ, ಫೆಡರಲ್ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದಲ್ಲಿರುವ ಶಿಯಾ ಮಸೀದಿ ತರ್ಲೈ ಇಮಾಮ್‌ಬರ್ಗಾದಲ್ಲಿ ಸ್ಫೋಟ ಸಂಭವಿಸಿದೆ.

ಸ್ಫೋಟದ ಬಳಿಕ ಪೊಲೀಸ್ ತಂಡಗಳು ಮತ್ತು ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆ ಆರಂಭಿಸಿದರು. ಸ್ಫೋಟದಲ್ಲಿ 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟದ ನಂತರ ಆಸ್ಪತ್ರೆ ಅಧಿಕಾರಿಗಳು ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಸದ್ಯ ಸ್ಫೋಟದ ಬಳಿಕ ವಿಡಿಯೋ ವೈರಲ್‌ ಆಗಿದ್ದು, ಸ್ಥಳದಲ್ಲಿದ್ದ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಗಾಯಾಳುಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ.



ಸ್ಫೋಟದ ಹೊಣೆಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲವಾದರೂ, ಶಂಕೆಯು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಅಥವಾ ಇಸ್ಲಾಮಿಕ್ ಸ್ಟೇಟ್ ಗುಂಪು ಆಗಿರುವ ಸಾಧ್ಯತೆ ಇದೆ. ಭದ್ರತಾ ಪಡೆಗಳು ಬಲೂಚ್ ಪ್ರತ್ಯೇಕತಾವಾದಿಗಳೊಂದಿಗೆ ಘರ್ಷಣೆ ನಡೆಸಿ ಸುಮಾರು 216 ಉಗ್ರರನ್ನು ಕೊಂದ ಸುಮಾರು ಒಂದು ವಾರದ ನಂತರ ಈ ದಾಳಿ ನಡೆದಿದೆ.

ಪಾಕ್‌ ಪ್ರಧಾನಿ ಪ್ರತಿಕ್ರಿಯೆ

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಮಸೀದಿಯಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 69 ಜನರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಧೃಡಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ದಾಳಿಯನ್ನು ಖಂಡಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಬಲೂಚ್‌ ಹೋರಾಟ

ಪಾಕಿಸ್ತಾನ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಬಲೂಚ್ ದಂಗೆಕೋರರು ಮತ್ತು ಪಾಕ್ ಸೇನೆ ನಡುವೆ ಘರ್ಷಣೆ ನಡೆದಿದ್ದು, ಸೈನಿಕರು ಸೇರಿ ನೂರಾರು ಮಂದಿ ಸಾವನ್ನಪ್ಪಿದ್ದರು. ಬಲೂಚಿಸ್ತಾನದ ಸ್ವಾಂತಂತ್ರ್ಯಕ್ಕಾಗಿ ಮಹಿಳೆಯರೂ ಟೊಂಕ ಕಟ್ಟಿ ನಿಂತಿದ್ದು, ಈಗಾಗಲೇ ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್‌ಗಳ ಕುರಿತು ಬಲೂಚಿಸ್ತಾನ ಲಿಬರೇಶನ್‌ ಆರ್ಮಿ ಫೋಟೋ ಬಿಡುಗಡೆ ಮಾಡಿ ಮಾಹಿತಿ ಹಂಚಿಕೊಂಡಿದೆ.