Imran Khan: ಜೈಲಿನಲ್ಲಿಯೇ ಇಮ್ರಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ನಾ ಪಾಕ್ ಸೇನಾ ಮುಖ್ಯಸ್ಥ? ಸ್ಫೋಟಕ ಸತ್ಯ ಬಯಲು!
ಭಾರತ ಹಾಗೂ ಪಾಕಿಸ್ತಾನದ ನಡುವೆ ಏರ್ಪಟ್ಟಿದ್ದ ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ. ಮತ್ತೆ ತನ್ನ ಹಳೆ ಚಾಳಿಯನ್ನು ಮುಂದುವರಿಸಿದೆ. ಭಾರತದ ಮೇಲೆ ದಾಳಿಗೆ ಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಆತಂರಿಕ ಸಮಸ್ಯೆ ಎದುರಾಗಿದೆ. ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬೆಂಬಲಿಗರು ಇದೀಗ ಸೇನಾ ಮುಖ್ಯಸ್ಥ ಆಸಿಮ್ ಅಮೀರ್ ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.


ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ಏರ್ಪಟ್ಟಿದ್ದ ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ. ಮತ್ತೆ ತನ್ನ ಹಳೆ ಚಾಳಿಯನ್ನು ಮುಂದುವರಿಸಿದೆ. ಭಾರತದ ಮೇಲೆ ದಾಳಿಗೆ ಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಆತಂರಿಕ ಸಮಸ್ಯೆ ಎದುರಾಗಿದೆ. ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರ ಬೆಂಬಲಿಗರು ಇದೀಗ ಸೇನಾ ಮುಖ್ಯಸ್ಥ ಆಸಿಮ್ ಅಮೀರ್ (Asim Munir) ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಸದ್ಯ ರಾವಲ್ಪಿಂಡಿ ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರ ಹತ್ಯೆ ಮಾಡಲು ಆಸೀಮ್ ಅಮೀರ್ ಸಂಚು ರೂಪಿಸಿದ್ದ ಎಂಬ ಸ್ಫೋಟಕ ಸತ್ಯವನ್ನು ಬಹಿರಂಗಗೊಳಿಸಿದ್ದಾರೆ.
ಆಸಿಮ್ ಮುನೀರ್ ರಾವಲ್ಪಂಡಿಯ ಜೈಲಿನ ಬಳಿ ಡ್ರೋನ್ ಮೂಲಕ ದಾಳಿ ನಡೆಸಲು ಯತ್ನಿಸಿದ್ದ. ನಂತರ ಅದನ್ನು ಭಾರತದ ತಲೆಗೆ ಕಟ್ಟಲು ಯೋಜನೆ ರೂಪಿಸಿದ್ದ ಎಂದು ಇಮ್ರಾನ್ ಬೆಂಬಲಿಗರು ಹೇಳಿದ್ದಾರೆ. ಭಾರತ ನಡೆಸಿದ ದಾಳಿಯಲ್ಲಿ ರಾವಲ್ಪಂಡಿಯ ವಾಯು ಸೇನೆಯ ನೆಲೆ ಸಂಪೂರ್ಣ ನಾಶವಾಗಿದೆ. ರಕ್ಷಣಾ ಸಚಿವ ಖ್ವಾಜಾ ಕೂಡ ಇದನ್ನು ಖಚಿತಪಡಿಸಿದ್ದಾರೆ. ಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ವಾಟ್ಸ್ಆ್ಯಪ್ ಸಂದೇಶದಲ್ಲಿ, ಇಮ್ರಾನ್ ಖಾನ್ ಬಿಡುಗಡೆಗಾಗಿ ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಗಂಡಾಪುರ್ ಇಸ್ಲಾಮಾಬಾದ್ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ತಿಳಿಸಲಾಗಿದೆ. ಇಮ್ರಾನ್ ಖಾನ್ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಬಂದಿದ್ದಾರೆ.
ಇಮ್ರಾನ್ ಖಾನ್ ಬೆಂಬಲಿಗರು ಸರ್ಕಾರ ಹಾಗೂ ಆಸೀಮ್ ಮುನೀರ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇಮ್ರಾನ್ ಖಾನ್ ಬಿಡುಗಡೆ ಮಾಡವುಂತೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಅಡಿಯಾಲಾ ಜೈಲಿನ ಮೇಲೆ ಡ್ರೋನ್ ದಾಳಿಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳುತ್ತಿದ್ದಾರೆ. ಸದ್ಯ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ.
ಈ ಸುದ್ದಿಯನ್ನೂ ಓದಿ: Operation Sindoor: ಪಾಕಿಸ್ತಾನದ ನೈಜ ಪವರ್ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಬಳಿ?
ನಿನ್ನೆ ರಾತ್ರಿ ಕದನ ವಿರಾಮದ ನಂತರ ಪಾಕಿಸ್ತಾನ ಮತ್ತೆ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ. ಶ್ರೀನಗರ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಡ್ರೋನ್‌ಗಳನ್ನು ಪತ್ತೆ ಹಚ್ಚಿ ತಡೆದ ನಂತರ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶನಿವಾರ ಸಂಜೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗಳಿಗೆ ತಕ್ಕ ಪ್ರತಿಕ್ರಿಯೆ ನೀಡುತ್ತಿವೆ ಎಂದು ಹೇಳಿದರು . ಸಶಸ್ತ್ರ ಪಡೆಗಳು ಈ ಉಲ್ಲಂಘನೆಗಳಿಗೆ ಸಮರ್ಪಕ ಮತ್ತು ಸೂಕ್ತ ಪ್ರತಿಕ್ರಿಯೆಯನ್ನು ನೀಡುತ್ತಿವೆ ಮತ್ತು ನಾವು ಈ ಉಲ್ಲಂಘನೆಗಳನ್ನು ಬಹಳ ಗಂಭೀರವಾಗಿ ಗಮನಿಸುತ್ತೇವೆ" ಎಂದು ಅವರು ರಾತ್ರಿ 11:20 ರ ಸುಮಾರಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.