ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sheikh Hasina: ನ್ಯಾಯಾಂಗ ನಿಂದನೆ ಪ್ರಕರಣ; ಶೇಖ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಬಾಂಗ್ಲಾ ನ್ಯಾಯಾಲಯ

ಬಾಂಗ್ಲಾದೇಶದ (Bangladesh) ಪದಚ್ಯುತ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರಿಗೆ ಬುಧವಾರ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಈ ತೀರ್ಪನ್ನು ಘೋಷಿಸಿದೆ.

ಶೇಖ್ ಹಸೀನಾಗೆ  6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಬಾಂಗ್ಲಾ ನ್ಯಾಯಾಲಯ

Profile Vishakha Bhat Jul 2, 2025 3:54 PM

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರಿಗೆ ಬುಧವಾರ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಈ ತೀರ್ಪನ್ನು ಘೋಷಿಸಿದೆ. ಹಸೀನಾಗೆ ಶಿಕ್ಷೆಯ ಪ್ರಮಾಣವನ್ನು ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ -1 ರ ಅಧ್ಯಕ್ಷ ನ್ಯಾಯಮೂರ್ತಿ ಮೊಹಮ್ಮದ್ ಗೋಲಮ್ ಮೊರ್ಟುಜಾ ಮೊಜುಂದರ್ ನೇತೃತ್ವದ ಮೂವರು ಸದಸ್ಯರ ಪೀಠ ನಿರ್ಧರಿಸಿದೆ. ಹಸೀನಾ ಅವರ ಶಿಕ್ಷೆಯು ಅವರ ಬಂಧನ ಅಥವಾ ಶರಣಾದ ದಿನದಿಂದ ಜಾರಿಗೆ ಬರುತ್ತದೆ.

ನ್ಯಾಯಮಂಡಳಿಯು, ಹಸೀನಾ ಜೊತೆಗೆ ಗೈಬಂಧದ ಗೋಬಿಂದಗಂಜ್‌ನ ಶಕಿಲ್ ಅಕಂದ್ ಬುಲ್ಬುಲ್‌ಗೆ ಎರಡು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಬುಲ್ಬುಲ್ ಬಾಂಗ್ಲಾದೇಶ ರಾಜಕೀಯ ವ್ಯಕ್ತಿಯಾಗಿದ್ದು, ಅವಾಮಿ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಬಾಂಗ್ಲಾದೇಶ ಛತ್ರ ಲೀಗ್ (ಬಿಸಿಎಲ್) ನೊಂದಿಗೆ ಸಂಬಂಧ ಹೊಂದಿದ್ದರು. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಶೇಖ್ ಹಸೀನಾ ಅವರು ಶಕೀಲ್ ಅಕಂದ್ ಬುಲ್ಬುಲ್ ಅವರೊಂದಿಗೆ ಮಾಡಿದ್ದ ಫೋನ್ ಕರೆ ಸೋರಿಕೆಯಾಗಿತ್ತು. ಆ ಆಡಿಯೋದಲ್ಲಿ, ಹಸೀನಾ ಎಂದು ಗುರುತಿಸಲಾದ ಧ್ವನಿಯು "ನನ್ನ ವಿರುದ್ಧ 227 ಪ್ರಕರಣಗಳನ್ನು ದಾಖಲಿಸಲಾಗಿದೆ, ಆದ್ದರಿಂದ ನಾನು 227 ಜನರನ್ನು ಕೊಲ್ಲಲು ಪರವಾನಗಿ ಪಡೆದಿದ್ದೇನೆ" ಎಂದು ಹೇಳಿರುವುದಾಗಿ ವರದಿಯಾಗಿತ್ತು.

11 ತಿಂಗಳ ಹಿಂದೆ ಅಧಿಕಾರದಿಂದ ತೆಗೆದುಹಾಕಲ್ಪಟ್ಟು ಭಾರತಕ್ಕೆ ಗಡಿಪಾರು ಮಾಡಲ್ಪಟ್ಟ ನಂತರ, ಪದಚ್ಯುತ ಅವಾಮಿ ಲೀಗ್ ಮುಖ್ಯಸ್ಥೆ ಹಸೀನಾಗೆ ಇದೇ ಮೊದಲ ಬಾರಿಗೆ ಶಿಕ್ಷೆ ನೀಡಲಾಗಿದೆ. ಈ ಹಿಂದೆ ಢಾಕಾ ನ್ಯಾಯಾಲಯವು ಹಸೀನಾ ಸೇರಿ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳು ಸೇರಿದಂತೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಿತ್ತು. ಗಡಿಪಾರಾಗಿ ಭಾರತದಲ್ಲಿರುವ ಹಸೀನಾ ಅವರ ಧನ್ಮೊಂಡಿ ನಿವಾಸ 'ಸುದಾಸಧನ್' ಮತ್ತು ಅವರ ಕುಟುಂಬ ಸದಸ್ಯರು ಹೊಂದಿರುವ ಇತರ ಕೆಲವು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೋರ್ಟ್‌ ಆದೇಶ ನೀಡಿತ್ತು.

ಈ ಸುದ್ದಿಯನ್ನೂ ಓದಿ: Sheikh Hasina: ಶೇಖ್‌ ಹಸೀನಾ ವಿರುದ್ಧ ಇಂಟರ್‌ಪೋಲ್‌ ಮೆಟ್ಟಿಲೇರಿದ ಬಾಂಗ್ಲಾದೇಶ

ಫೆ. 6 ರಂದು ಶೇಖ್‌ ಹಸೀನಾ ಭಾಷಣದಿಂದ ಆಕ್ರೋಶಗೊಂಡ ಉದ್ವಿಕ್ತರ ಗುಂಪೊಂದು ಢಾಕಾದಲ್ಲಿರುವ ಅವರ ತಂದೆಯ ನಿವಾಸವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದೆ. ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮಾರಕ ಮತ್ತು ಅವರ ನಿವಾಸವನ್ನು ಧ್ವಂಸಗೊಳಿಸಿದ್ದರು. ಮನೆಗೆ ಬೆಂಕಿ ಹಚ್ಚಿ, ಜೆಸಿಬಿ, ಮೂಲಕ ಮನೆ ನಾಶಮಾಡಲು ಯತ್ನಿಸಿದ್ದರು. ನಂತರ ಹಸೀನಾ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಪಲಾಯನ ಮಾಡಿದ್ದರು.