Pahalgam Terror Attack: ಪಹಲ್ಗಾಮ್ ದಾಳಿಗೆ ಕಾರಣರಾದವರನ್ನು ನ್ಯಾಯದ ಕಟಕಟೆಯಲ್ಲಿ ನಿಲ್ಲಿಸಿ- ವಿಶ್ವಸಂಸ್ಥೆ
15 ರಾಷ್ಟ್ರಗಳನ್ನೊಳಗೊಂಡ ವಿಶ್ವ ಸಂಸ್ಥೆ ಭದ್ರತಾ ಮಂಡಳಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಇದಕ್ಕೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡುವಂತೆ ತಿಳಿಸಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ(Pahalgam Terror Attack) ಏಪ್ರಿಲ್ 22ರಂದು ಭಯೋತ್ಪಾದಕ ದಾಳಿಯಲ್ಲಿ ಸುಮಾರು 26 ಜನರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು. ಈ ಭಯೋತ್ಪಾದನಾ ಕೃತ್ಯದ ಅಪರಾಧಿಗಳು, ಸಂಘಟಕರು, ಹಣಕಾಸು ಪೂರೈಸಿರುವವರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ನ್ಯಾಯದ ಕಟಕಟೆಗೆ ತರಬೇಕಿದೆ ಎಂದು ವಿಶ್ವ ಸಂಸ್ಥೆ ಭದ್ರತಾ ಮಂಡಳಿಯು ತಿಳಿಸಿದೆ.


ನವದೆಹಲಿ: ಪಹಲ್ಗಾಮ್ (Pahalgam) ಭಯೋತ್ಪಾದಕ ದಾಳಿಯನ್ನು (Pahalgam Terror Attack) ವಿಶ್ವಸಂಸ್ಥೆಯ (United Nations) ಭದ್ರತಾ ಮಂಡಳಿಯು ( UNSC ) ಖಂಡಿಸಿದೆ. 15 ರಾಷ್ಟ್ರಗಳ ಮಂಡಳಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯನ್ನು ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಈ ಕೃತ್ಯಕ್ಕೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಿ, ಇದರ ಸಂಘಟಕರು ಮತ್ತು ಇದಕ್ಕೆ ಹಣಕಾಸು ಒದಗಿಸುವವರನ್ನು ನ್ಯಾಯದ ಕಟಕಟೆಗೆ ತರಬೇಕು ಎಂದು ಅದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
15 ರಾಷ್ಟ್ರಗಳನ್ನೊಳಗೊಂಡ ವಿಶ್ವ ಸಂಸ್ಥೆ ಭದ್ರತಾ ಮಂಡಳಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಇದಕ್ಕೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡುವಂತೆ ತಿಳಿಸಿದೆ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22ರಂದು ಭಯೋತ್ಪಾದಕ ದಾಳಿಯಲ್ಲಿ ಸುಮಾರು 26 ಜನರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು. ಈ ಭಯೋತ್ಪಾದನಾ ಕೃತ್ಯದ ಅಪರಾಧಿಗಳು, ಸಂಘಟಕರು, ಹಣಕಾಸು ಪೂರೈಸಿರುವವರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ನ್ಯಾಯದ ಕಟಕಟೆಗೆ ತರಬೇಕಿದೆ ಎಂದು ವಿಶ್ವ ಸಂಸ್ಥೆ ಭದ್ರತಾ ಮಂಡಳಿಯು ತಿಳಿಸಿದೆ.
ಅಂತಾರಾಷ್ಟ್ರೀಯ ಕಾನೂನು ಮತ್ತು ಸಂಬಂಧಿತ ಭದ್ರತಾ ಮಂಡಳಿಯ ನಿರ್ಣಯಗಳ ಅಡಿಯಲ್ಲಿ ಈ ನಿಟ್ಟಿನಲ್ಲಿ ಎಲ್ಲಾ ಸಂಬಂಧಿತ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಸಹಕರಿಸುವಂತೆ ವಿಶ್ವಸಂಸ್ಥೆ ಒತ್ತಾಯಿಸಿದೆ. ಭದ್ರತಾ ಮಂಡಳಿಯ ಅಧ್ಯಕ್ಷರು ಎಲ್ಲಾ 15 ರಾಷ್ಟ್ರಗಳ ಸದಸ್ಯರ ಪರವಾಗಿ ಈ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ. ಫ್ರಾನ್ಸ್ ಮಂಡಳಿಯ ಅಧ್ಯಕ್ಷ ಸ್ಥಾನದಲ್ಲಿರುವುದರಿಂದ ವಿಶ್ವಸಂಸ್ಥೆಯ ರಾಯಭಾರಿಗೆ ಫ್ರಾನ್ಸ್‌ನ ಖಾಯಂ ಪ್ರತಿನಿಧಿ ಜೆರೋಮ್ ಬೊನ್ನಾಫಾಂಟ್ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಈ ಕುರಿತು ಅಮೆರಿಕ ಕರಡು ಪ್ರತಿಯನ್ನು ಮಂಡಿಸಿದ್ದು, ಈ ಬಗ್ಗೆ ಕೌನ್ಸಿಲ್ ಸದಸ್ಯರು ಚರ್ಚೆ ನಡೆಸಿ ಬಳಿಕ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನ ಪ್ರಸ್ತುತ ಶಾಶ್ವತ ಸದಸ್ಯ ರಾಷ್ಟ್ರವಾವಲ್ಲ. ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕ ಸಾವನ್ನಪ್ಪಿದ್ದು, ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳು ಮೃತರ ಕುಟುಂಬ, ಭಾರತ ಮತ್ತು ನೇಪಾಳ ಸರ್ಕಾರಕ್ಕೆ ತಮ್ಮ ಸಹಾನುಭೂತಿ ಮತ್ತು ಸಂತಾಪವನ್ನು ವ್ಯಕ್ತಪಡಿಸಿವೆ. ಗಾಯಗೊಂಡವರ ತ್ವರಿತ ಮತ್ತು ಸಂಪೂರ್ಣ ಚೇತರಿಕೆಗಾಗಿ ಹಾರೈಸಿವೆ.
ಭಯೋತ್ಪಾದನೆಯು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರುವ ಅತ್ಯಂತ ಗಂಭೀರ ಪ್ರಕರಣಗಳಲ್ಲಿ ಒಂದಾಗಿದೆ. ಯಾವುದೇ ಭಯೋತ್ಪಾದನಾ ಕೃತ್ಯಗಳು ಅಪರಾಧವಾಗಿದೆ ಎಂದು ಪುನರುಚ್ಚರಿಸಿದ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು, ಅಂತಾರಾಷ್ಟ್ರೀಯ ನಿರಾಶ್ರಿತರ ಕಾನೂನು ಮತ್ತು ಅಂತಾರಾಷ್ಟ್ರೀಯ ಮಾನವೀಯ ಕಾನೂನು ಸೇರಿದಂತೆ ಅಂತಾರಾಷ್ಟ್ರೀಯ ಕಾನೂನಿನಡಿಯಲ್ಲಿ ಭಯೋತ್ಪಾದಕ ಕೃತ್ಯಗಳಿಂದ ಉಂಟಾಗುವ ಶಾಂತಿ ಮತ್ತು ಭದ್ರತೆಗೆ ಒಡ್ಡುವ ಬೆದರಿಕೆಗಳ ವಿರುದ್ಧ ಎಲ್ಲಾ ದೇಶಗಳು ಹೋರಾಡುವ ಅಗತ್ಯವಿದೆ ಎಂದು ಹೇಳಿದೆ.
ಇದನ್ನೂ ಓದಿ: Pahalgam Terror Attack: ಭಾರತದಲ್ಲಿ ನೆಲೆಯಾಗುವ ಕನಸಿನೊಂದಿಗೆ ಬಂದಿದ್ದ ಪಾಕ್ ಹಿಂದೂ ಕುಟುಂಬಗಳು ಈಗ ಅತಂತ್ರ
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್, ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ನಾವು ಅವಲೋಕಿಸುತ್ತಿರುವುದಾಗಿ ಹೇಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದಾಳಿಗಳನ್ನು ನಾವು ಖಂಡಿಸುತ್ತೇವೆ. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಖಚಿತಪಡಿಸಿಕೊಳ್ಳಲು ಎರಡು ರಾಷ್ಟ್ರಗಳು ಹೆಚ್ಚಿನ ಸಂಯಮವನ್ನು ವಹಿಸಬೇಕೆಂದು ಒತ್ತಾಯಿಸುವುದಾಗಿ ಅವರು ಹೇಳಿದರು.
ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರಸ್ತುತ ರೋಮ್‌ನಲ್ಲಿರುವ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ನ್ಯೂಯಾರ್ಕ್‌ಗೆ ಹಿಂತಿರುಗಿದ ಬಳಿಕ ಈ ಬಗ್ಗೆ ಭಾರತ ಮತ್ತು ಪಾಕಿಸ್ತಾನದ ನಾಯಕರೊಂದಿಗೆ ಮಾತನಾಡುವ ಸಾಧ್ಯತೆ ಇದೆ. ಈ ರಾಷ್ಟ್ರಗಳು ಯುದ್ಧಕ್ಕೆ ಹೋಗಬಹುದಾದ ಸಾಧ್ಯತೆಯನ್ನು ಕಡಿಮೆ ಮಾಡುವಂತೆ ನಾವು ನೋಡಿಕೊಳ್ಳಬೇಕಿದೆ ಎಂದು ಅವರು ಹೇಳಿದರು