ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India Pak Ceasefire: ಕಾಶ್ಮೀರ ಸಮಸ್ಯೆಗೆ ಶೀಘ್ರದಲ್ಲಿಯೇ ಪರಿಹಾರ ; ಕದನ ವಿರಾಮದ ನಂತರ ಟ್ರಂಪ್‌ ಮೊದಲ ಹೇಳಿಕೆ

ಆಪರೇಷನ್‌ ಸಿಂದೂರ್‌ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ ಏರ್ಪಟ್ಟಿತ್ತು. ಸತತ ನಾಲ್ಕು ದಿನಗಳ ಬಳಿಕ ಪಾಕಿಸ್ತಾನ ಅಮೆರಿಕದ ಬಳಿ ಕದನ ವಿರಾಮದ ಮಧ್ಯಸ್ಥಿಕೆ ವಹಿಸುವಂತೆ ಕೋರಿಕೊಂಡಿತ್ತು. ಅಮೆರಿಕದ ಮಧ್ಯಸ್ಥಿಕೆ ವಹಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ.

ಕಾಶ್ಮೀರ ಸಮಸ್ಯೆಯ ಕುರಿತು ಚರ್ಚೆ ನಡೆಸುತ್ತೇನೆ; ಡೊನಾಲ್ಡ್‌ ಟ್ರಂಪ್‌

Profile Vishakha Bhat May 11, 2025 10:31 AM

ವಾಷಿಂಗ್ಟನ್:‌ ಆಪರೇಷನ್‌ ಸಿಂದೂರ್‌ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ ಏರ್ಪಟ್ಟಿತ್ತು. ಸತತ ನಾಲ್ಕು ದಿನಗಳ ಬಳಿಕ ಪಾಕಿಸ್ತಾನ ಅಮೆರಿಕದ ಬಳಿ ಕದನ ವಿರಾಮದ ಮಧ್ಯಸ್ಥಿಕೆ ವಹಿಸುವಂತೆ ಕೋರಿಕೊಂಡಿತ್ತು. ಅಮೆರಿಕದ ಮಧ್ಯಸ್ಥಿಕೆ ವಹಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ. ಇದೀಗ ಕದನ ವಿರಾಮದ ಕುರಿತು ಮಾತನಾಡಿರುವ ಟ್ರಂಪ್‌ ಎರಡೂ ದೇಶವನ್ನು ಶ್ಲಾಘಿಸಿದ್ದಾರೆ. ಉಭಯ ದೇಶಗಳೊಂದಿಗೆ ಹೆಚ್ಚಿನ ವ್ಯಾಪಾರದಲ್ಲಿ ತೊಡಗಿಸಿಕೊಳ್ಳುವುದಾಗಿ ಮತ್ತು ಕಾಶ್ಮೀರ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಅವರೊಂದಿಗೆ ಕೆಲಸ ಮಾಡುವುದಾಗಿ ಅವರು ಹೇಳಿದರು.

ಅಮೆರಿಕದ ಮಧ್ಯಸ್ಥಿಕೆಯ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ಪರಸ್ಪರ ವಿರುದ್ಧದ ಮಿಲಿಟರಿ ಕಾರ್ಯಾಚರಣೆಗಳನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ ಎಂದು ಡೊನಾಲ್ಡ್ ಟ್ರಂಪ್ ಶನಿವಾರ ಸಂಜೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಘೋಷಿಸಿದರು. ಆದಾಗ್ಯೂ, ಪಾಕಿಸ್ತಾನದೊಂದಿಗೆ ನೇರ ಮಾತುಕತೆಯ ನಂತರ ಕದನ ವಿರಾಮ ಒಪ್ಪಂದಕ್ಕೆ ಬಂದಿರುವುದಾಗಿ ಭಾರತ ಹೇಳಿದೆ. ಹಲವರ ಸಾವು ಮತ್ತು ವಿನಾಶಕ್ಕೆ ಕಾರಣವಾಗಬಹುದಾದ ಪ್ರಸ್ತುತ ಆಕ್ರಮಣವನ್ನು ನಿಲ್ಲಿಸುವ ಸಮಯ ಬಂದಿದೆ . ಭಾರತ ಮತ್ತು ಪಾಕಿಸ್ತಾನದ ಬಲವಾದ ಮತ್ತು ಅಚಲವಾದ ಶಕ್ತಿಶಾಲಿ ನಾಯಕತ್ವದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಲಕ್ಷಾಂತರ ಒಳ್ಳೆಯ ಮತ್ತು ಮುಗ್ಧ ಜನರು ಸಾಯಬಹುದಿತ್ತು! ನಿಮ್ಮ ಕೆಚ್ಚೆದೆಯ ಕ್ರಮಗಳಿಂದ ನಿಮ್ಮ ಪರಂಪರೆ ಬಹಳವಾಗಿ ವೃದ್ಧಿಯಾಗಿದೆ. ಈ ಐತಿಹಾಸಿಕ ಮತ್ತು ವೀರೋಚಿತ ನಿರ್ಧಾರವನ್ನು ತೆಗೆದುಕೊಳ್ಳಲು ಅಮೆರಿಕ ಸಹಾಯ ಮಾಡಿದೆ ಎಂದು ನನಗೆ ಹೆಮ್ಮೆಯಿದೆ.

ಈ ಸುದ್ದಿಯನ್ನೂ ಓದಿ: India Pakistan Ceasefire: ಭಾರತ- ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ; ಡೊನಾಲ್ಡ್‌ ಟ್ರಂಪ್‌ ಹೇಳಿಕೆ

ಎರಡು ದೇಶಗಳ ನಡುವೆ ಇರುವ ಕಾಶ್ಮೀರದ ಸಮಸ್ಯೆಗೆ ಪರಿಹಾರ ಕಂಡಕೊಳ್ಳಬೇಕು. ಉಭಯ ದೇಶಗಳೊಂದಿಗೆ ನಾನು ಖುದ್ದು ಚರ್ಚೆ ನಡೆಸುತ್ತೇನೆ ಎಂದು ಟ್ರಂಪ್‌ ಹೇಳಿದ್ದಾರೆ. ಆದರೆ ಪಾಕಿಸ್ತಾನ ಕದನ ವಿರಾಮ ಮಾಡಿದ ಕುರಿತು ಎಲ್ಲಿಯೂ ಉಲ್ಲೇಖ ಮಾಡಿಲ್ಲ. ಶ್ರೀನಗರ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಪಾಕಿಸ್ತಾನ ಮತ್ತೆ ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಿದೆ. ಭಾರತೀಯ ಪಡೆಗಳು ಸರಿಯಾದ ಪ್ರತ್ಯುತ್ತರ ನೀಡಿದೆ.