ಪಾಕಿಸ್ತಾನದ ಕರಾಚಿ ಶಾಪಿಂಗ್ ಮಾಲ್‍ನಲ್ಲಿ ಬೆಂಕಿ ದುರಂತ: ಸಾವಿನ ಸಂಖ್ಯೆ 55ಕ್ಕೆ ಏರಿಕೆ
Fire broke out in Pakistan: ಪಾಕಿಸ್ತಾನದ ಕರಾಚಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಾವಿನ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬ ಕುರಿತು ತನಿಖೆ ನಡೆಯುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಿಧಾನಗತಿಯ ಕಾರ್ಯಾಚರಣೆ ಬಗ್ಗೆ ನಾಪತ್ತೆಯಾದವರ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ಕರಾಚಿ ಶಾಪಿಂಗ್ ಮಾಲ್‍ನಲ್ಲಿ ಬೆಂಕಿ ದುರಂತ -
ಇಸ್ಲಾಮಾಬಾದ್, ಜ. 22: ಪಾಕಿಸ್ತಾನದ (Pakistan) ಅತಿದೊಡ್ಡ ನಗರ ಕರಾಚಿಯ ಶಾಪಿಂಗ್ ಮಾಲ್‌ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 55ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶನಿವಾರ (ಜನವರಿ 17) ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ಒಟ್ಟು 55 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಕರಾಚಿಯ ದಕ್ಷಿಣ ಜಿಲ್ಲೆಯ ಉಪ ಆಯುಕ್ತ ಜಾವೇದ್ ನಬಿ ಖೋಸೊ ಹೇಳಿದ್ದಾರೆ.
ಮೂರು ಅಂತಸ್ತಿನ ಗುಲ್ ಪ್ಲಾಜಾದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮಾಲ್ ಒಳಗೆ ಸಿಲುಕಿಕೊಂಡವರ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯಕರ್ತರ ನಿಧಾನಗತಿಯ ಕಾರ್ಯಾಚರಣೆ ಬಗ್ಗೆ ನಾಪತ್ತೆಯಾದ ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಮೃತದೇಹಗಳನ್ನು ಗುರುತುಹಿಡಿಯುವ ಸಲುವಾಗಿ 50ಕ್ಕೂ ಹೆಚ್ಚು ಕುಟುಂಬಗಳು ಡಿಎನ್‌ಎ ಮಾದರಿಗಳನ್ನು ನೀಡಿವೆ ಎಂದು ಪ್ರಾಂತೀಯ ಆರೋಗ್ಯ ಅಧಿಕಾರಿ ಸುಮ್ಮಯ್ಯ ಸೈಯದ್ ತಿಳಿಸಿದರು.
ಸ್ವಿಸ್ ಬಾರ್ ಅಗ್ನಿ ಅವಘಡ; ಬೆಂಕಿ ಹೊತ್ತಿಕೊಳ್ಳಲು ಕಾರಣ ಇದೇನಾ?
ಡಿಎನ್ಎ ಮಾದರಿಗಳಲ್ಲಿ ಹೋಲಿಕೆ ಕಂಡುಬಂದ ನಂತರ ಮೃತದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸುತ್ತೇವೆ ಎಂದು ಸಿವಿಲ್ ಆಸ್ಪತ್ರೆಯ ಕರಾಚಿ ಶವಾಗಾರದ ಬಳಿ ಸುಮ್ಮಯ್ಯ ಹೇಳಿದರು. ಅಂದಹಾಗೆ, ಕರಾಚಿಯ ಮಾರುಕಟ್ಟೆಗಳು ಮತ್ತು ಕಾರ್ಖಾನೆಗಳು ಕಳಪೆ ಮೂಲಸೌಕರ್ಯಗಳಿಗೆ ಕುಖ್ಯಾತಿಯಾಗಿದ್ದು, ಅಲ್ಲಿ ಬೆಂಕಿ ಅವಘಡ ಸಾಮಾನ್ಯ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಬೆಂಕಿ ದುರಂತ ಸಂಭವಿಸಿದ್ದು ಮಾತ್ರ ತುಂಬಾ ಅಪರೂಪ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸರ್ಕಾರಿ ಸಮಿತಿಯು ತನಿಖೆಯನ್ನು ಪ್ರಾರಂಭಿಸಿದೆ. ಆದರೆ ಬೆಂಕಿ ದುರಂತಕ್ಕೆ ಏನು ಕಾರಣ ಎಂಬುದು ತಿಳಿದುಬಂದಿಲ್ಲ.
ಆಂಧ್ರ ಪ್ರದೇಶದಲ್ಲಿ ಹೊತ್ತಿ ಉರಿದ ಬಸ್; ಮೂವರು ಸಜೀವ ದಹನ
ಆಂಧ್ರ ಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ (ಜನವರಿ 22) ಮುಂಜಾನೆ ಖಾಸಗಿ ಬಸ್ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಅಪಘಾತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಿರಿವೆಲ್ಲಮೆಟ್ಟಾ ಗ್ರಾಮದ (ಶಿರಿವೆಲಾ ಮಂಡಲ) ಬಳಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ ಮತ್ತು ಟ್ರಕ್ ಚಾಲಕರು ಹಾಗೂ ಟ್ರಕ್‌ನ ಕ್ಲೀನರ್ ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿದ್ದಾರೆ ಎಂದು ನಂದ್ಯಾಲ್ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ದೇಹ ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ ಮೃತರ ಗುರುತನ್ನು ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ.
ಪೊಲೀಸರ ಪ್ರಕಾರ, ARBCVR ಪ್ರೈವೇಟ್ ಟ್ರಾವೆಲ್ಸ್ ಒಡೆತನದ ಬಸ್ 36 ಪ್ರಯಾಣಿಕರೊಂದಿಗೆ ನೆಲ್ಲೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿತ್ತು. ಬಸ್‌ನ ಟೈರ್ ಇದ್ದಕ್ಕಿದ್ದಂತೆ ಸಿಡಿದಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ವಿಭಜಕವನ್ನು ದಾಟಿ ಮುಂದೆ ಬರುತ್ತಿದ್ದ ಕಂಟೇನರ್ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ಭಾರಿ ಬೆಂಕಿ ಕಾಣಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ಎರಡೂ ವಾಹನಗಳು ಆಹುತಿಯಾದವು. ಬೆಂಕಿಯ ತೀವ್ರತೆ ಎಷ್ಟು ಹೆಚ್ಚಾಗಿತ್ತೆಂದರೆ, ಬಸ್ಸಿನೊಳಗಿನ ಪ್ರಯಾಣಿಕರು ಭಯಭೀತರಾಗಿದ್ದರು. ಮುಖ್ಯ ಬಾಗಿಲು ಮತ್ತು ತುರ್ತು ನಿರ್ಗಮನ ದ್ವಾರ ಎರಡೂ ತೆರೆಯಲು ವಿಫಲವಾದ ಕಾರಣ, ಅನೇಕ ಪ್ರಯಾಣಿಕರು ಬೇಗನೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಆದರೆ ಇನ್ನೊಂದು ವಾಹನದಲ್ಲಿ ಬರುತ್ತಿದ್ದ ಚಾಲಕನೊಬ್ಬ ಕಿಟಕಿಗಳನ್ನು ಒಡೆದು ಪ್ರಯಾಣಿಕರು ಹೊರಬರಲು ನೆರವಾಗಿದ್ದಾನೆ.
ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ, ಕೆಲವರು ಬಸ್ಸಿನಿಂದ ಜಿಗಿದು ಕಾಲ್ತುಳಿತದಲ್ಲಿ ಗಾಯಗೊಂಡರು. ಎಲ್ಲ ಗಾಯಾಳುಗಳನ್ನು ಚಿಕಿತ್ಸೆಗಾಗಿ ನಂದ್ಯಾಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.