PM Modi: ಕೆರಿಬಿಯನ್ ರಾಷ್ಟ್ರಕ್ಕೆ ಮೊದಲ ಭೇಟಿ- ಪ್ರಧಾನಿ ಮೋದಿಗೆ ಭೋಜ್‌ಪುರಿ ಚೌತಾಲ್ ಮೂಲಕ ಸ್ವಾಗತ
ಇದೇ ಮೊದಲ ಬಾರಿಗೆ ಕೆರಿಬಿಯನ್ ರಾಷ್ಟ್ರಕ್ಕೆ (Caribbean nation) ಭೇಟಿ ನೀಡಿದ ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಅವರನ್ನು ಭೋಜ್‌ಪುರಿ ಚೌತಾಲ್‌ನ (Bhojpuri Chautaal) ಸಾಂಪ್ರದಾಯಿಕ ಪ್ರದರ್ಶನದೊಂದಿಗೆ ಸ್ವಾಗತಿಸಲಾಯಿತು. 1999ರ ಬಳಿಕ ಕೆರಿಬಿಯನ್ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ಮೊದಲ ಭಾರತದ ಪ್ರಧಾನಿಯಾಗಿದ್ದಾರೆ ನರೇಂದ್ರ ಮೋದಿ.


ಪೋರ್ಟ್ ಆಫ್ ಸ್ಪೇನ್: ಇದೇ ಮೊದಲ ಬಾರಿಗೆ ಕೆರಿಬಿಯನ್ ರಾಷ್ಟ್ರಕ್ಕೆ (Caribbean nation) ಭೇಟಿ ನೀಡಿದ ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಅವರನ್ನು ಭೋಜ್‌ಪುರಿ ಚೌತಾಲ್‌ನ (Bhojpuri Chautaal) ಸಾಂಪ್ರದಾಯಿಕ ಪ್ರದರ್ಶನದೊಂದಿಗೆ ಸ್ವಾಗತಿಸಲಾಯಿತು. 1999ರ ಬಳಿಕ ಕೆರಿಬಿಯನ್ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ಮೊದಲ ಭಾರತದ ಪ್ರಧಾನಿಯಾಗಿದ್ದಾರೆ ನರೇಂದ್ರ ಮೋದಿ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಬಂದಿಳಿದಾಗ ಸಾಂಪ್ರದಾಯಿಕ ಭೋಜ್‌ಪುರಿ ಚೌತಾಲ್‌ನನ್ನು ಪ್ರದರ್ಶಿಸಿ ಸ್ವಾಗತಿಸುತ್ತಿರುವುದನ್ನು ಕಾಣಬಹುದಾಗಿದೆ.
ಟ್ರಿನಿಡಾಡ್ ಮತ್ತು ಟೊಬೆಗೊಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಂಪ್ರದಾಯಿಕ ಭೋಜ್‌ಪುರಿ ಚೌತಾಲ್‌ನ ಪ್ರದರ್ಶನದ ಮೂಲಕ ಸ್ವಾಗತಿಸಲಾಯಿತು. ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸಾಂಸ್ಕೃತಿಕ ಪ್ರದರ್ಶನದ ವಿಡಿಯೊವನ್ನು ಹಂಚಿಕೊಂಡ ಪ್ರಧಾನಿ ಮೋದಿ, ಟ್ರಿನಿಡಾಡ್ ಮತ್ತು ಟೊಬೆಗೊದಲ್ಲಿ ಭೋಜ್‌ಪುರಿ ಚೌತಾಲ್ ಪ್ರತಿಧ್ವನಿಸುತ್ತಿದೆ ಎಂದು ಹೇಳಿದ್ದಾರೆ.
ಟ್ರಿನಿಡಾಡ್ ಮತ್ತು ಟೊಬೆಗೊದಲ್ಲಿನ ಭಾರತೀಯ ಸಮುದಾಯದ ಸದಸ್ಯರನ್ನು ಭೇಟಿಯಾದ ಪ್ರಧಾನಿ ಮೋದಿ, ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದರು. ಸಮುದಾಯವು ವಿವಿಧ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸಿದ್ದಲ್ಲದೆ ಭಾರತೀಯ ಸಂಸ್ಕೃತಿಯೊಂದಿಗೆ ಆಳವಾಗಿ ಸಂಪರ್ಕ ಹೊಂದಿದೆ ಎಂದು ಅವರು ಹೇಳಿದರು.
ಹಲವಾರು ವರ್ಷಗಳ ಹಿಂದೆ ಅನೇಕ ಭಾರತೀಯರು ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದರು. ಅಲ್ಲಿ ಅವರು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಟ್ರಿನಿಡಾಡ್ ಮತ್ತು ಟೊಬೆಗೊದ ಅಭಿವೃದ್ಧಿ ಪ್ರಯಾಣವನ್ನು ಶ್ರೀಮಂತಗೊಳಿಸುತ್ತಿದ್ದಾರೆ. ಜೊತೆಗೆ ಭಾರತದೊಂದಿಗೆ ಸಂಪರ್ಕವನ್ನು ಉಳಿಸಿಕೊಂಡಿದ್ದಾರೆ. ಭಾರತೀಯ ಸಂಸ್ಕೃತಿಯ ಬಗ್ಗೆಯೂ ಉತ್ಸುಕರಾಗಿದ್ದಾರೆ. ಪೋರ್ಟ್ ಆಫ್ ಸ್ಪೇನ್‌ನಲ್ಲಿ ಮರೆಯಲಾಗದ ಸ್ವಾಗತಕ್ಕಾಗಿ ಸ್ಥಳೀಯ ಭಾರತೀಯ ಸಮುದಾಯಕ್ಕೆ ಕೃತಜ್ಞರಾಗಿರುವುದಾಗಿ ಪ್ರಧಾನಿ ಎಕ್ಸ್ ನಲ್ಲಿ ಬರೆದಿದ್ದಾರೆ.
Bhojpuri Chautaal echoes in Trinidad & Tobago! pic.twitter.com/k2OBhPg7ch
— narendramodi_in (@narendramodi_in) July 3, 2025
ಭಾರತವನ್ನು ತಿಳಿದುಕೊಳ್ಳಿ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಶಂಕರ್ ರಾಮಜತ್ತನ್, ನಿಕೋಲಸ್ ಮರಾಜ್ ಮತ್ತು ವಿನ್ಸ್ ಮಹಾತೋ ಅವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡ ಮೋದಿ, ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಪಂಚದಾದ್ಯಂತ ಹೆಚ್ಚಿನ ಜನರು ಭಾಗವಹಿಸಲು ಉತ್ಸಾಹ ತೋರುವಂತೆ ಮಾಡಿದೆ. ಭಾರತದೊಂದಿಗೆ ನಮ್ಮ ಸಮುದಾಯದ ಸಂಪರ್ಕವನ್ನು ಗಾಢವಾಗಿಸಿದೆ ಎಂದು ಹೇಳಿದರು.
ಕೆರಿಬಿಯನ್ ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಭೇಟಿ ಇದಾಗಿದೆ. ಟ್ರಿನಿಡಾಡ್ ಮತ್ತು ಟೊಬಾಗೋದ ಪ್ರಧಾನಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರ ಆಹ್ವಾನದ ಮೇರೆಗೆ ಮೋದಿ ಅವರು ಇಲ್ಲಿಗೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: Viral Video: ತರಗತಿಯಲ್ಲಿ ಫ್ಯಾಷನ್ ಶೋ ನಡೆಸಿದ ಶಿಕ್ಷಕ; ಮಕ್ಕಳ ಕಣ್ಣಲ್ಲಿ ಖುಷಿಯ ಕಾಮನಬಿಲ್ಲು! ವಿಡಿಯೊ ನೀವೂ ನೋಡಿ
ಪ್ರಧಾನಿ ಅವರು ಪಿಯಾರ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರನ್ನು ಪ್ರಧಾನಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಮತ್ತು ಕೆರಿಬಿಯನ್ ರಾಷ್ಟ್ರದ 38 ಸಚಿವರು ಮತ್ತು ನಾಲ್ವರು ಸಂಸತ್ ಸದಸ್ಯರು ಬರಮಾಡಿಕೊಂಡರು.