UNO: ಪಹಲ್ಗಾಮ್ ದಾಳಿ ಖಂಡಿಸಿದ ವಿಶ್ವಸಂಸ್ಥೆ ಮುಖ್ಯಸ್ಥ; ಯುದ್ಧ ಮಾಡದಿರಲು ಒತ್ತಾಯ
ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ವಿಶ್ವಸಂಸ್ಥೆ ಮಧ್ಯಸ್ಥಿಕೆ ವಹಿಸಿದೆ. ವಿಶ್ವಸಂಸ್ಥೆ ಮುಖ್ಯಸ್ಥರು ಭಾರತ ಮತ್ತು ಪಾಕಿಸ್ತಾನಗಳು ಸಂಘರ್ಷದ ಅಂಚಿನಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ.ಆಂಟೋನಿಯೊ ಗುಟೆರೆಸ್ ಯುಎನ್‌ಎಸ್‌ಸಿ ವೇದಿಕೆಯಿಂದ ಪತ್ರಿಕಾಗೋಷ್ಠಿಯಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.


ಜಿನಿವಾ: ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ವಿಶ್ವಸಂಸ್ಥೆ (UNO) ಮಧ್ಯಸ್ಥಿಕೆ ವಹಿಸಿದೆ. ವಿಶ್ವಸಂಸ್ಥೆ ಮುಖ್ಯಸ್ಥರು ಭಾರತ ಮತ್ತು ಪಾಕಿಸ್ತಾನಗಳು ಸಂಘರ್ಷದ ಅಂಚಿನಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ. ಯುದ್ಧವೊಂದೇ ಪರಿಹಾರವಲ್ಲ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಯುಎನ್‌ಎಸ್‌ಸಿ ವೇದಿಕೆಯಿಂದ ಪತ್ರಿಕಾಗೋಷ್ಠಿಯಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ "ಭೀಕರ ಭಯೋತ್ಪಾದಕ ದಾಳಿ ನಂತರ ಭಾರತದ ಭಾವನೆ ನಮಗೆ ಅರ್ಥವಾಗುತ್ತದೆ. ಇಂತಹ ವಿಧ್ವಂಸಕ ಕೃತ್ಯ ಎಸಗಿರುವುದು ಅಪರಾಧ. ಭಯೋತ್ಪಾದನೆಯನ್ನು ನಿರ್ಮೂಲ ಮಾಡುವಲ್ಲಿ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನಕ್ಕೆ ಕಠಿಣವಾಗಿ ಪ್ರಶ್ನೆ ಮಾಡಿದ ಅವರು ಇಂತಹ ಕೃತ್ಯಗಳನ್ನು ಏಕೆ ಬೆಂಬಲಿಸುತ್ತೀರಿ ಎಂದು ಹೇಳಿದ್ದಾರೆ. ದಾಳಿಯಲ್ಲಿ ಎಲ್‌ಇಟಿ ಭಾಗಿಯಾಗಿದೆಯೇ ? ಎಂದು ಅವರು ಪ್ರಶ್ನಿಸಿದ್ದಾರೆ.
ಎಲ್ಲದಕ್ಕೂ ಯುದ್ಧವೇ ಪರಿಹಾರವಲ್ಲ ಎಂದು ಹೇಳಿದ ಗುಟೆರೆಸ್, ಶಾಂತಿಯ ಮಂತ್ರ ಪಠಿಸಿದ್ದಾರೆ. “ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸುವುದು, ರಾಜತಾಂತ್ರಿಕತೆ ಮತ್ತು ಶಾಂತಿಯನ್ನು ಉತ್ತೇಜಿಸುವ ಯಾವುದೇ ಕ್ರಮವನ್ನು ಬೆಂಬಲಿಸಲು ವಿಶ್ವಸಂಸ್ಥೆ ಸಿದ್ಧವಾಗಿದೆ” ಎಂದು ಅವರು ಹೇಳಿದ್ದಾರೆ. ಎರಡೂ ದೇಶಗಳ ಸರ್ಕಾರಗಳು ಮತ್ತು ಜನರು ವಿಶ್ವಸಂಸ್ಥೆಯ ಕೆಲಸಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಅದನ್ನು ನಾನು ಗೌರವಿಸುತ್ತೇನೆ ಮತ್ತು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ದೇಶ-ದೇಶಗಳ ನಡುವಿನ ಸಂಬಂಧಗಳು ಕುದಿಯುವ ಹಂತವನ್ನು ತಲುಪುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ ಎಂದು ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Pahalgam Terror Attack: ಪಹಲ್ಗಾಮ್ ಉಗ್ರ ದಾಳಿಯ ಮತ್ತೊಂದು ವಿಡಿಯೊ ವೈರಲ್-ಏನಿದೆ ಅದ್ರಲ್ಲಿ?
ಪಾಕಿಸ್ತಾನ ಸೇನೆ ತನ್ನ ಉದ್ಧಟತನವನ್ನು ಮುಂದುವರಿಸಿದೆ. ಸಸತ 12 ದಿನವೂ LoC ಅಲ್ಲಿ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆಯೂ ಪ್ರತ್ಯುತ್ತರ ನೀಡಿದೆ. ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ವಿರುದ್ಧ “ದೃಢ ಮತ್ತು ನಿರ್ಣಾಯಕ” ಕ್ರಮ ತೆಗೆದುಕೊಳ್ಳಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕ್‌ಗೆ ಎಚ್ಚರಿಕೆ ನೀಡಿದ್ದಾರೆ.