Narendra Modi: ನಾವು ಉಗ್ರರನ್ನು ಮಾತ್ರ ಹೊಡೆದಿದ್ದೇವೆ; ಆಪರೇಷನ್ ಸಿಂದೂರ್ ಕುರಿತು ಟ್ರಂಪ್‌ಗೆ ಮಾಹಿತಿ ನೀಡಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ಉಭಯ ದೇಶದ ನಾಯಕರು 35 ನಿಮಿಷಗಳ ಕಾಲ ಮಾತನಾಡಿದರು ಎಂದು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ.


ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (Narendra Modi) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರೊಂದಿಗೆ ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ಉಭಯ ದೇಶದ ನಾಯಕರು 35 ನಿಮಿಷಗಳ ಕಾಲ ಮಾತನಾಡಿದರು ಎಂದು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಕರೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಆಪರೇಷನ್ ಸಿಂದೂರ್‌ದ ಕುರಿತು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಭಾರತ ಹಾಗೂ ಪಾಕ್ ನಡುವೆ ಕದನ ವಿರಾಮ ಘೋಷಣೆ ಕುರಿತು ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಪಾಕ್ ಮನವಿ ಬಳಿಕ ಭಾರತ ಪರಸ್ಪರ ಹೊಂದಾಣಿಕೆಯೊಂದಿಗೆ ಕದನ ವಿರಾಮ ಘೋಷಿಸಿದೆ. ಇದರಲ್ಲಿ ಯಾವ ದೇಶದ ಮಧ್ಯಸ್ಥಿಕೆಯೂ ಇರಲಿಲ್ಲ. ಯಾವುದೇ ವ್ಯಾಪಾರ ಒಪ್ಪಂದದ ಬಗ್ಗೆಯೂ ಚರ್ಚಿಸಿಲ್ಲ. ಭಾರತವು ಇನ್ನುಮುಂದೆ ಭಯೋತ್ಪಾದನೆಯನ್ನು ಪ್ರಾಕ್ಸಿ ಯುದ್ಧವಾಗಿ ನೋಡುವುದಿಲ್ಲ, ಬದಲಿಗೆ ಯುದ್ಧವಾಗಿ ನೋಡುತ್ತದೆ. ಭಾರತದ ಆಪರೇಷನ್ ಸಿಂದೂರ್ ಇನ್ನೂ ಮುಂದುವರಿಯುತ್ತದೆ. ಉಗ್ರರನ್ನು ನಾವು ಸೆದೆಬಡಿಯುತ್ತೇವೆ ಎಂದು ಅವರು ಹೇಳಿದ್ದಾರೆ. ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಮಾತ್ರ ಗುರಿಯಾಗಿಸಿಕೊಂಡು ನಾವು ದಾಳಿ ನಡೆಸಿದ್ದೇವೆ.
ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಸಂಬಂಧಿಸಿದಂತೆ ಭಾರತದ ನಿಲುವನ್ನು ಒತ್ತಿ ಹೇಳಿದರು. ಭಾರತ ಎಂದಿಗೂ ಮಧ್ಯಸ್ಥಿಕೆಯನ್ನು ಒಪ್ಪಿಕೊಂಡಿಲ್ಲ, ಸ್ವೀಕರಿಸುವುದಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಮೊದಲು ನನ್ನ ಮಧ್ಯಸ್ಥಿಕೆಯಿಂದಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ ಎಂದು ಟ್ರಂಪ್ ಹೇಳಿಕೊಂಡಿದ್ದರು. ಇದೀಗ ಟ್ರಂಪ್‌ಗೆ ಮೋದಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ: Operation Sindoor: ಆಪರೇಷನ್ ಸಿಂದೂರ್‌ನಲ್ಲಿ ಭಾರತ ಯುದ್ಧ ವಿಮಾನಗಳನ್ನು ಕಳೆದುಕೊಳ್ತಾ? ಸೇನಾಧಿಕಾರಿ ಹೇಳಿದ್ದೇನು?
ಸುಮಾರು 35 ನಿಮಿಷಗಳ ಕಾಲ ಟ್ರಂಪ್ ಜೊತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿಯಲ್ಲಿ ಮಾತನಾಡಿದರು. ಇದೇ ವೇಳೆ ಕ್ವಾಡ್ ಸಭೆಗೆ ಭಾಗಿಯಾಗಲು ಭಾರತಕ್ಕೆ ಬರುವಂತೆ ಟ್ರಂಪ್‌ಗೆ ಮೋದಿ ಮನವಿ ಮಾಡಿದ್ದು, ಮೋದಿ ಆಹ್ವಾನವನ್ನು ಟ್ರಂಪ್ ಸ್ವೀಕರಿಸಿದ್ದಾರೆ.