Pahalgam Attack: ಪಹಲ್ಗಾಮ್ ದಾಳಿಕೋರರು ಸ್ವಾತಂತ್ರ್ಯ ಹೋರಾಟಗಾರರಂತೆ! ನಾಚಿಗೆ ಬಿಟ್ಟು ಉಗ್ರರನ್ನು ಹಾಡಿ ಹೊಗಳಿದ ಪಾಕ್
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಸುಮಾರು 26 ಮಂದಿ ಮೃತಪಟ್ಟಿದ್ದರು. ಈ ಘಟನೆಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಈ ನಡುವೆಯೇ ಇಸ್ಲಾಮಾಬಾದ್‌ನ ವಿದೇಶಾಂಗ ಸಚಿವ, ದೇಶದ ಉಪ ಪ್ರಧಾನ ಮಂತ್ರಿಯೂ ಆಗಿರುವ ಇಶಾಕ್ ದಾರ್ ದುಷ್ಕರ್ಮಿಗಳನ್ನು "ಸ್ವಾತಂತ್ರ್ಯ ಹೋರಾಟಗಾರರು" ಎಂದು ಬಣ್ಣಿಸಿದ್ದಾರೆ.


ಇಸ್ಲಾಮಾಬಾದ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯ ಬಳಿಕ ಪಾಕಿಸ್ತಾನದ ಒಂದೊಂದೇ ಬಣ್ಣ ಬಯಲಾಗುತ್ತಿದೆ. ರಕ್ಷಣಾ ಸಚಿವ (Pakistan Defence Minister) ಖವಾಜಾ ಆಸಿಫ್ (Khawaja Asif) ಪಾಕ್ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ ಬೆನ್ನಲೇ ಇದೀಗ ಪಾಕಿಸ್ತಾನದ ಉಪ ಪ್ರಧಾನಿ (Pakistans Deputy PM) ಇಶಾಕ್ ದಾರ್ (Ishaq Dar) ಪಹಲ್ಗಾಮ್ ದಾಳಿಕೋರರನ್ನು 'ಸ್ವಾತಂತ್ರ್ಯ ಹೋರಾಟಗಾರರು' ಎಂದು ಶ್ಲಾಘಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತ ಸರ್ಕಾರ ಕೈಗೊಂಡ ನಿರ್ಧಾರಗಳ ಬಳಿಕ ಪಾಕ್ ನ ಉನ್ನತ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದ ಎರಡು ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸುಮಾರು 26 ಮಂದಿ ಮೃತಪಟ್ಟಿದ್ದರು. ಆದರೆ ಇದನ್ನು ಪಾಕಿಸ್ತಾನ ಸಮರ್ಥಿಸಿಕೊಂಡಿದೆ. ಈ ಘಟನೆಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಈ ನಡುವೆಯೇ ಇಸ್ಲಾಮಾಬಾದ್‌ನ ವಿದೇಶಾಂಗ ಸಚಿವ, ದೇಶದ ಉಪ ಪ್ರಧಾನ ಮಂತ್ರಿಯೂ ಆಗಿರುವ ಇಶಾಕ್ ದಾರ್ ದುಷ್ಕರ್ಮಿಗಳನ್ನು "ಸ್ವಾತಂತ್ರ್ಯ ಹೋರಾಟಗಾರರು" ಎಂದು ಬಣ್ಣಿಸಿದ್ದಾರೆ.
ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯ ಬಳಿಕ ಭಾರತ ಸರ್ಕಾರವು 1960ರ ಸಿಂಧೂ ಜಲ ಒಪ್ಪಂದವನ್ನು ರದ್ದು ಮಾಡಿದೆ. ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತಾ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದಲ್ಲಿರುವ ಪಾಕಿಸ್ತಾನಿಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿದೆ.ಇದಾದ ಬೆನ್ನಲ್ಲೇ ಪಾಕ್ ನಾಯಕರಿಂದ ಈ ರೀತಿಯ ಹೇಳಿಕೆಗಳು ಹೊರಬೀಳುತ್ತಿವೆ.
ಇದನ್ನೂ ಓದಿ: Pahalgam Terror Attack: ಉಗ್ರರಿಗೆ ಬೆಂಬಲ ನೀಡುತ್ತಿರುವುದು ಹೌದು... ಸಂದರ್ಶನದಲ್ಲಿ ಒಪ್ಪಿಕೊಂಡ ಪಾಕಿಸ್ತಾನ ರಕ್ಷಣಾ ಸಚಿವ
ಸಿಂಧೂ ನದಿ ನೀರು ಒಪ್ಪಂದ ರದ್ದಾಗಿರುವ ಕುರಿತು ಪ್ರತಿಕ್ರಿಯಿಸಿರುವ ದಾರ್, ಇದು ಯುದ್ಧದ ಕೃತ್ಯಕ್ಕೆ ಹೋಲುತ್ತದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದಲ್ಲಿರುವ 240 ಮಿಲಿಯನ್ ಜನರು ಈ ನೀರನ್ನು ಬಳಸುತ್ತಿದ್ದಾರೆ. ಅದನ್ನು ನೀವು ತಡೆಯಲು ಸಾಧ್ಯವಿಲ್ಲ. ಇದು ಯುದ್ಧದ ಕೃತ್ಯಕ್ಕೆ ಸಮಾನ. ಈ ನಿಟ್ಟಿನಲ್ಲಿ ಯಾವುದೇ ಅಮಾನತು ಅಥವಾ ಅತಿಕ್ರಮಣವನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅವರು ಹೇಳಿದರು.
ಪಾಕಿಸ್ತಾನದ ವಿರುದ್ಧ ಭಾರತ ನಡೆಸಿರುವ "ಟಿಟ್-ಫಾರ್-ಟ್ಯಾಟ್" ಗೆ ಪ್ರತಿಕ್ರಿಯೆಯಾಗಿ ಅವರು ಈ ಮಾತನ್ನು ಹೇಳಿದ್ದಾರೆ.
ಪಾಕಿಸ್ತಾನದ ವಿರುದ್ಧ ಭಾರತ ನಡೆಸಿರುವ "ಟಿಟ್-ಫಾರ್-ಟ್ಯಾಟ್" ಗೆ ಪ್ರತಿಕ್ರಿಯೆಯಾಗಿ ಅವರು ಈ ಮಾತನ್ನು ಹೇಳಿದ್ದಾರೆ.ಪಾಕಿಸ್ತಾನ ಸರ್ಕಾರವೂ ಕೂಡ ಸಿಂಧೂ ನದಿ ನೀರು ಒಪ್ಪಂದ ರದ್ದು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಹೇಳಿದೆ.
ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಕೂಡ ಪಾಕಿಸ್ತಾನಿಗಳಿಗೆ ಹಾನಿಯಾದರೆ ಭಾರತಕ್ಕೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಕೂಡ ಪಾಕಿಸ್ತಾನಿಗಳಿಗೆ ಹಾನಿಯಾದರೆ ಭಾರತಕ್ಕೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.ನಾವು ಅವರ ಮೂಗಿನ ಮೇಲೆ ಬೆಲೆ ತೆರುವಂತೆ ಮಾಡುತ್ತೇವೆ. ಭಾರತದಿಂದ ನಮ್ಮ ನಾಗರಿಕರಿಗೆ ಹಾನಿಯಾದರೆ ಭಾರತೀಯ ನಾಗರಿಕರು ಸುರಕ್ಷಿತವಾಗಿ ಉಳಿಯುವುದಿಲ್ಲ. ಅದು ಪ್ರತೀಕಾರದ ಕ್ರಮವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.ಿಲ್ಲ. ಅದು ಪ್ರತೀಕಾರದ ಕ್ರಮವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.