ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಗಾನ ಕೋಗಿಲೆ ಎಸ್. ಜಾನಕಿಗೆ ದೋಹಾದಲ್ಲಿ ಗಾನ ನಮನ

S. Janaki: ಗಾನ ಕೋಗಿಲೆ, ಗಾನ ಗಂಧರ್ವೆ ಎಸ್. ಜಾನಕಿ ಅವರ ಸವಿನೆನಪಿಗಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್, ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ದೊಹಾದ ಅಶೋಕ ಸಭಾಂಗಣದಲ್ಲಿ ‘ಜಾನಕಿ ಸ್ಮೃತಿ’ ಅದ್ದೂರಿ ಸಂಗೀತ ಸಂಜೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ಭಾರತೀಯ ಸಮುದಾಯದ ಅನೇಕ ಗಣ್ಯರು ಭಾಗವಹಿಸಿ ಎಸ್. ಜಾನಕಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ದೋಹಾದಲ್ಲಿ 'ಜಾನಕಿ ಸ್ಮೃತಿ' ಗಾನ ನಮನ

ಸಂಗ್ರಹ ಚಿತ್ರ -

ದೋಹಾ: ತಮ್ಮ ಗಾಯನದಿಂದ ಸಂಗೀತ ಪ್ರಿಯರನ್ನು ಮಂತ್ರಮುಗ್ಧಗೊಳಿಸಿದ, ಎಲ್ಲರ ಹೃದಯಗಳಲ್ಲಿ ಸದಾ ಜೀವಂತವಾಗಿರುವ ಭಾರತದ ಗಾನ ಕೋಗಿಲೆ, ಗಾನ ಗಂಧರ್ವೆ ಎಸ್. ಜಾನಕಿ (S. Janaki) ಅವರ ಸವಿನೆನಪಿಗಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರ (Indian Cultural Centre) ಕತಾರ್, ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ದೋಹಾದ (doha) ಅಶೋಕ ಸಭಾಂಗಣದಲ್ಲಿ ಇತ್ತೀಚೆಗೆ ‘ಜಾನಕಿ ಸ್ಮೃತಿ’ (Janaki smruti) ಎಂಬ ಅದ್ದೂರಿ ಸಂಗೀತ ಸಂಜೆಯನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಎಸ್. ಜಾನಕಿ ಅವರು ಹಾಡಿರುವ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಐಸಿಸಿ ಅಧ್ಯಕ್ಷರಾದ ಎ.ಪಿ. ಮಣಿಕಂಠನ್ ಅವರು, ಭಾರತೀಯ ಚಿತ್ರರಂಗಕ್ಕೆ ಮತ್ತು ಸಂಗೀತ ಕ್ಷೇತ್ರಕ್ಕೆ ಎಸ್. ಜಾನಕಿ ಅವರು ನೀಡಿರುವ ಅಪಾರ ಕೊಡುಗೆಯನ್ನು ಸ್ಮರಿಸಿದರು. ಅವರ ಅದ್ಭುತ ಧ್ವನಿ ಸೌಂದರ್ಯ ಹಾಗೂ ಗಾಯನ ಶೈಲಿ ದೇಶದ ಲಕ್ಷಾಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಶಾಶ್ವತವಾಗಿ ಉಳಿದಿದೆ ಎಂದು ಬಣ್ಣಿಸಿದರು.

IRCTC ಹಗರಣ; ಲಾಲು ಕುಟುಂಬದ ವಿರುದ್ಧ ದೋಷಾರೋಪ ಹೊರಿಸಿದ ದೆಹಲಿ ಕೋರ್ಟ್‌

ಕತಾರ್‌ನ ಪ್ರಮುಖ ಕನ್ನಡ ಸಂಘಟನೆಯಾದ ಕರ್ನಾಟಕ ಸಂಘದ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗಾಯಕರು ಭಾರತದ ನಾನಾ ಭಾಷೆಗಳಲ್ಲಿ ಗಾನಸುಧೆ ಹರಿಸಿದ್ದ ಎಸ್. ಜಾನಕಿ ಅವರ ಅಮರ ಗೀತೆಗಳಿಗೆ ಹಾಡಿ ಗಾಯಕಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

jans

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕರ್ನಾಟಕ ಸಂಘ ಕತಾರ್‌ನ ಸದಸ್ಯರು ಮತ್ತು ಪ್ರತಿಭಾವಂತ ಗಾಯಕರು ಎಸ್. ಜಾನಕಿ ಅವರು ಹಾಡಿದ ಸದಾಹಸಿರು ಕನ್ನಡ ಗೀತೆಗಳ ಮಧುರ ಗಾಯನದ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಸಭಾಂಗಣದಲ್ಲಿದ್ದ ಸಂಗೀತ ಪ್ರೇಮಿಗಳು ಕನ್ನಡಿಗರ ಈ ಗಾನ ವೈಭವಕ್ಕೆ ಕರತಾಡನದ ಮೂಲಕ ಅಭಿನಂದನೆ ಸಲ್ಲಿಸಿದರು.

ಗ್ರಾಹಕರೇ ಗಮನಿಸಿ; ಇಂದಿನಿಂದ ನಾಲ್ಕು ದಿನ ಬ್ಯಾಂಕ್‌ ಸೇವೆ ಇರಲ್ಲ, ಕಾರಣವೇನು?

ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು, ಸಂಘದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಹಾಗೂ ಕತಾರ್‌ನ ಭಾರತೀಯ ಸಮುದಾಯದ ಪ್ರಮುಖ ಗಣ್ಯರು ಭಾಗವಹಿಸಿದ್ದರು.