ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Nimisha Priya: ನಿಮಿಷಾ ಪ್ರಿಯಾಗೆ ಮರಣದಂಡನೆ ರದ್ದತಿ ಹೇಳಿಕೆ ಸುಳ್ಳಾ? ವಿದೇಶಾಂಗ ಇಲಾಖೆ ಮಾಹಿತಿ ನೀಡಿದ್ದೇನು?

ಯೆಮನ್‌ನಲ್ಲಿ 2017 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕೇರಳದ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂಬ ಹೇಳಿಕೆಯನ್ನು ವಿದೇಶಾಂಗ ಸಚಿವಾಲಯ ಮಂಗಳವಾರ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ.

ನಿಮಿಷಾ ಪ್ರಿಯಾಗೆ ಮರಣದಂಡನೆ ರದ್ಧು ಸುಳ್ಳಾ?

Vishakha Bhat Vishakha Bhat Jul 29, 2025 4:33 PM

ಸನಾ: ಯೆಮನ್‌ನಲ್ಲಿ 2017 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕೇರಳದ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂಬ ಹೇಳಿಕೆಯನ್ನು ವಿದೇಶಾಂಗ ಸಚಿವಾಲಯ ಮಂಗಳವಾರ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ. ನಿಮಿಷಾ ಪ್ರಿಯಾ ಪ್ರಕರಣದ ಕುರಿತು ಕೆಲವು ವ್ಯಕ್ತಿಗಳು ಹಂಚಿಕೊಂಡಿರುವ ಮಾಹಿತಿಯು ತಪ್ಪಾಗಿದೆ" ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ. ಸೋಮವಾರ, ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿಯು ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ ಎಂದು ಹೇಳಿಕೊಂಡಿದೆ. ಆದರೆ ಸರ್ಕಾರ ಈ ಹೇಳಿಕೆಯನ್ನು ನಿರಾಕರಿಸಿದ್ದು, ಗೊಂದಲ ಸೃಷ್ಟಿಯಾಗಿದೆ.

ಯೆಮೆನ್‌ನಲ್ಲಿ ಜೈಲಿನಲ್ಲಿರುವ ಭಾರತೀಯ ಪ್ರಜೆ ನಿಮಿಷಾ ಪ್ರಿಯಾಗೆ (Nimisha Priya Case) ಕೊನೆಗೂ ರಿಲೀಫ್‌ ಸಿಕ್ಕಿದೆ. ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಮಂಗಳವಾರ ರದ್ದುಗೊಳಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಚೇರಿ ಹೇಳಿದೆ. ಆದಾಗ್ಯೂ, ಯೆಮೆನ್ ಅಧಿಕಾರಿಗಳಿಂದ ಅಧಿಕೃತ ಲಿಖಿತ ಸಂವಹನ ಇನ್ನೂ ಬಂದಿಲ್ಲ ಎಂದು ಕಚೇರಿ ತಿಳಿಸಿತ್ತು. ಆದರೆ ಇದೀಗ ಅಂತಹ ಯಾವುದೇ ಬೆಳವಣಿಗೆ ಕುರಿತು ಮಾಹಿತಿ ಇಲ್ಲ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ ಎಂದು ಹೇಳಲಾಗುತ್ತಿದೆ.

37 ವರ್ಷದ ನಿಮಿಷಾ ಪ್ರಿಯಾ 2018ರ ಜೂನ್‌ನಲ್ಲಿ ಯೆಮೆನ್ ಪ್ರಜೆಯೊಬ್ಬರನ್ನು ಕೊಂದ ಆರೋಪದ ಮೇಲೆ ಜುಲೈ 16 ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿತ್ತು ನಿಮಿಷಾ ಪ್ರಿಯಾ ಕೇರಳದ ಪಾಲಕ್ಕಾಡ್ ಜಿಲ್ಲೆಯವರಾಗಿದ್ದು , ಉತ್ತಮ ಉದ್ಯೋಗಾವಕಾಶಗಳಿಗಾಗಿ 2008 ರಲ್ಲಿ ಯೆಮೆನ್‌ಗೆ ತೆರಳಿದ್ದರು. ತರಬೇತಿ ಪಡೆದ ನರ್ಸ್ ಆಗಿದ್ದ ಅವರು ನಂತರ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹ್ದಿ ಅವರೊಂದಿಗೆ ವ್ಯಾಪಾರ ಪಾಲುದಾರಿಕೆಯನ್ನು ಮಾಡಿಕೊಂಡರು ಮತ್ತು ರಾಜಧಾನಿ ಸನಾದಲ್ಲಿ ಜಂಟಿಯಾಗಿ ಕ್ಲಿನಿಕ್ ಅನ್ನು ನಡೆಸುತ್ತಿದ್ದರು.

ಈ ಸುದ್ದಿಯನ್ನೂ ಓದಿNimisha Priya: ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಶೀಘ್ರವೇ ಜೈಲಿನಿಂದ ರಿಲೀಸ್‌?

ಈ ನಿರ್ಧಾರವನ್ನು ದೇಶದ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ನವೆಂಬರ್ 2023ರಲ್ಲಿ ಎತ್ತಿಹಿಡಿದಿತ್ತು. ಆದರೆ, ಭಾರತೀಯ ಗ್ರ್ಯಾಂಡ್ ಮುಫ್ತಿ ಮತ್ತು ಭಾರತ ಸರ್ಕಾರಗಳ ಜಂಟಿ ಪ್ರಯತ್ನದಿಂದ ಅವರ ಮರಣದಂಡನೆಯನ್ನು ಮುಂದೂಡಲಾಗಿತ್ತು. ಮಹ್ದಿ ಆಕೆಗೆ ಕಿರುಕುಳ ನೀಡಿ, ಪಾಸ್‌ಪೋರ್ಟ್ ಅನ್ನು ತೆಗೆದುಕೊಂಡಿದ್ದ. ತನ್ನ ದಾಖಲೆಗಳನ್ನು ಮರಳಿ ಪಡೆಯುವ ಪ್ರಯತ್ನದಲ್ಲಿ, ಪ್ರಿಯಾ 2017 ರಲ್ಲಿ ಮಹ್ದಿಗೆ ನಿದ್ರಾಜನಕ ಔಷಧ ನೀಡಿದ್ದಳು. ಅದು ಓವರ್‌ ಡೋಸ್‌ ಆಗಿ ಆತ ಮೃತಪಟ್ಟಿದ್ದ. 2018 ರಲ್ಲಿ ಆಕೆಯನ್ನು ಬಂಧಿಸಿ ಕೊಲೆ ಆರೋಪ ಹೊರಿಸಲಾಯಿತು ಮತ್ತು 2020 ರಲ್ಲಿ ಯೆಮೆನ್ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು.