ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Barack Obama: ಬರಾಕ್‌ ಒಬಾಮಾ ಅರೆಸ್ಟ್‌? ವಿಡಿಯೋ ಹಂಚಿಕೊಂಡ ಟ್ರಂಪ್‌

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಎಐ ರಚಿತ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ಮಾಜಿ ಅಧ್ಯಕ್ಷ ಬರಾಕ್ ಒಬಾಮಾ (Barack Obama) ಅವರನ್ನು ಶ್ವೇತಭವನದಲ್ಲಿ ಬಂಧಿಸುತ್ತಿರುವುದನ್ನು ತೋರಿಸುವ ಕೃತಕ ಬುದ್ಧಿಮತ್ತೆ ಆಧಾರಿತ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಬರಾಕ್‌ ಒಬಾಮಾ ಬಂಧನದ ವಿಡಿಯೋ ಹಂಚಿಕೊಂಡ ಟ್ರಂಪ್‌

Profile Vishakha Bhat Jul 21, 2025 10:11 AM

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಎಐ ರಚಿತ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ಮಾಜಿ ಅಧ್ಯಕ್ಷ ಬರಾಕ್ ಒಬಾಮಾ (Barack Obama) ಅವರನ್ನು ಶ್ವೇತಭವನದಲ್ಲಿ ಬಂಧಿಸುತ್ತಿರುವುದನ್ನು ತೋರಿಸುವ ಕೃತಕ ಬುದ್ಧಿಮತ್ತೆ ಆಧಾರಿತ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಭಾರೀ ವಿವಾದಕ್ಕೆ ಕಾರಣವಾಗಿದೆ. 2016 ರ ಅಮೆರಿಕದ ಅಧ್ಯಕ್ಷೀಯ ಗೆಲುವಿನಲ್ಲಿ ರಷ್ಯಾದ ಪ್ರಭಾವವಿದೆ ಎಂಬ ಆರೋಪಗಳ ಮೇಲೆ ಒಬಾಮಾ ಆಡಳಿತವನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಹೇಳಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಟ್ರೂತ್ ಸೋಶಿಯಲ್‌ನಲ್ಲಿ ಈ ವಿಡಿಯೋವನ್ನು ಪೋಸ್ಟ್‌ ಮಾಡಿದ ಟ್ರಂಪ್‌, ವಿಶೇಷವಾಗಿ ಅಧ್ಯಕ್ಷರು, ಕಾನೂನಿಗಿಂತ ದೊಡ್ಡವರಲ್ಲ ಎಂದು ಹೇಳಿದ್ದಾರೆ. ನಂತರ ಮಾಜಿ ಅಧ್ಯಕ್ಷ ಜೋ ಬಿಡೆನ್ ಸೇರಿದಂತೆ ಹಲವಾರು ಅಮೇರಿಕನ್ ರಾಜಕಾರಣಿಗಳು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ನಂತರ ಶ್ವೇತಭವನದಲ್ಲಿ ಒಬಾಮಾ ಅವರನ್ನು ಬಂಧಿಸಿಸುವ ವಿಡಿಯೋ ಕಾಣಬಹುದು. ಇನ್ನೊಂದೆಡೆ ಒಮಾಬಾ ಅವರು ಕೈದಿಯ ವೇಷದಲ್ಲಿರುವುದನ್ನು ತೋರಿಸಲಾಗಿದೆ.



2016 ರ ಅಮೆರಿಕದ ಅಧ್ಯಕ್ಷೀಯ ಗೆಲುವಿನಲ್ಲಿ ರಷ್ಯಾದ ಪ್ರಭಾವವಿದೆ ಎಂಬ ಆರೋಪಗಳ ಮೇಲೆ ಒಬಾಮಾ ಆಡಳಿತವನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಈ ಹಿಂದೆ ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಹೇಳಿದ್ದರು.

ಈ ಸುದ್ದಿಯನ್ನೂ ಓದಿ: Stock Market: ಟ್ರಂಪ್‌ ಟಾರಿಫ್‌ ಮುಂದೂಡಿಕೆ, ಟೆಕ್ಸ್‌ಟೈಲ್‌ ಷೇರುಗಳಿಗೆ ಶುಕ್ರದೆಸೆ! ಬಾಂಗ್ಲಾಗೆ ಬಿತ್ತು ಟ್ರಂಪ್‌ ಟ್ಯಾಕ್ಸ್‌

ರಹಸ್ಯ ದಾಖಲೆಗಳನ್ನು ಉಲ್ಲೇಖಿಸಿ ಗಬ್ಬಾರ್ಡ್, ಒಬಾಮಾ ಆಡಳಿತದ ಹಿರಿಯ ಅಧಿಕಾರಿಗಳು ಟ್ರಂಪ್ ಅವರ ಗೆಲುವು ರಷ್ಯಾದ ಹಸ್ತಕ್ಷೇಪದಿಂದಾಗಿ ಎಂದು ತೋರಿಸಲು ಇಂಟೆಲ್ ಮೌಲ್ಯಮಾಪನಗಳನ್ನು "ತಯಾರಿಸಿದ್ದಾರೆ" ಮತ್ತು ರಾಜಕೀಯಗೊಳಿಸಿದ್ದಾರೆ ಎಂದು ಹೇಳಿದ್ದರು. ಒಬಾಮಾ ಮತ್ತು ಅಮೆರಿಕದ ಮಾಜಿ ಹಿರಿಯ ರಾಷ್ಟ್ರೀಯ ಭದ್ರತಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಕರೆ ನೀಡಿದರು, ಇದನ್ನು ಟ್ರಂಪ್ ಕೂಡ ಪ್ರತಿಧ್ವನಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಜನವರಿಯಲ್ಲಿ ನಡೆದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಅಂತ್ಯಕ್ರಿಯೆಯಲ್ಲಿ ಟ್ರಂಪ್ ಮತ್ತು ಒಬಾಮಾ ಸ್ನೇಹಪರ ಸಂಭಾಷಣೆಯಲ್ಲಿ ತೊಡಗಿದ್ದರು.