ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಇರಾನ್ ಮೇಲೆ ಹಿಂದೆಂದೂ ನೋಡಿರದ ಬಲಪ್ರಯೋಗ ಮಾಡುತ್ತೇವೆ: ಡೊನಾಲ್ಡ್ ಟ್ರಂಪ್

ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆಯ ಬಳಿಕ ಇದಕ್ಕೆ ಪ್ರತೀಕಾರ ತೀರಿಸುವುದಾಗಿ ಇರಾನ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲೆ ಹಿಂದೆಂದೂ ನೋಡಿರದ ಬಲಪ್ರಯೋಗ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಇರಾನ್ ಪ್ರತಿಕಾರದ ಪ್ರತಿಜ್ಞೆ ಮಾಡಿದ ಬೆನ್ನಲ್ಲೇ ಅಮೆರಿಕ ಮತ್ತು ಇಸ್ರೇಲ್ ನೆಲೆಗಳ ಮೇಲೆ ದಾಳಿಗಳನ್ನು ನಡೆಸಿದೆ.

ಇರಾನ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಸಂಗ್ರಹ ಚಿತ್ರ -

ವಾಷಿಂಗ್ಟನ್: ಇರಾನ್ (Iran) ದಾಳಿಗಳನ್ನು ಮುಂದುವರಿಸಿದರೆ ಅವರು ಹಿಂದೆಂದೂ ನೋಡಿರದ ರೀತಿಯಲ್ಲಿ ಬಲ ಪ್ರಯೋಗ ಮಾಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (US President Donald Trump) ಅವರು ಎಚ್ಚರಿಕೆ ನೀಡಿದ್ದಾರೆ. ಯುಎಸ್ ಮತ್ತು ಇಸ್ರೇಲ್ (Isreal) ಸೇನಾ ಪಡೆಯು ಟೆಹ್ರಾನ್ (tehran) ಮೇಲೆ ದಾಳಿ (Israel-US strikes) ನಡೆಸಿ ಇರಾನ್ ತನ್ನ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ (Ayatollah Khamenei) ಅವರನ್ನು ಹತ್ಯೆ ಮಾಡಿದ ಬಳಿಕ ಇದಕ್ಕೆ ಪ್ರತೀಕಾರ ತೀರಿಸುವುದಾಗಿ ಇರಾನ್ ಪ್ರತಿಜ್ಞೆ ಮಾಡಿದ ಬೆನ್ನಲ್ಲೇ ಅಮೆರಿಕ ಮತ್ತು ಇಸ್ರೇಲ್ ನೆಲೆಗಳ ಮೇಲೆ ದಾಳಿಯನ್ನು ಪ್ರಾರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಟ್ರಂಪ್ ಈ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಖಾತೆಯಾದ ಟ್ರುತ್ ಸೋಶಿಯಲ್‌ನಲ್ಲಿ ಬರೆದಿರುವ ಅವರು, ಇರಾನ್ ಮೇಲೆ ಅತ್ಯಂತ ಕಠಿಣವಾಗಿ, ಹಿಂದೆಂದೂ ನೋಡಿರದ ಬಲಪ್ರಯೋಗದಿಂದ ದಾಳಿ ಮಾಡುವುದಾಗಿ ಹೇಳಿದ್ದಾರೆ. ಇದಕ್ಕೆ ಅವರು ಅವಕಾಶ ನೀಡದೇ ಇರುವುದು ಉತ್ತಮ ಎಂದು ತಿಳಿಸಿದ್ದಾರೆ.

ಇರಾನ್​​​ - ಇಸ್ರೇಲ್​​​ ಯುದ್ಧ: ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌, ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

ಇಸ್ರೇಲ್ ಮತ್ತು ಯುಎಸ್ ಜಂಟಿ ನಡೆಸಿರುವ ಕಾರ್ಯಾಚರಣೆಯಲ್ಲಿ ಇರಾನ್ ತನ್ನ ನಾಯಕನನ್ನು ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಅದು ಪ್ರತೀಕಾರದ ಪ್ರತಿಜ್ಞೆ ಮಾಡಿದ್ದರಿಂದ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ.

ಒಪ್ಪಂದ ಮುರಿದು ಟೆಹ್ರಾನ್ ಪರಮಾಣು ಚಟುವಟಿಕೆಗಳನ್ನು ಪುನರಾರಂಭಿಸಿದ ಬಳಿಕ ಇಸ್ರೇಲ್ ಜೊತೆ ಸೇರಿ ಅಮೆರಿಕ ಶನಿವಾರ ಇರಾನ್ ಮೇಲೆ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ರಾಜಧಾನಿ ಟೆಹ್ರಾನ್ ಸೇರಿದಂತೆ ಅನೇಕ ಇರಾನಿನ ನಗರಗಳ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಖಮೇನಿ ಸೇರಿದಂತೆ ಅವರ ಕುಟುಂಬದ ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಖಮೇನಿ ಅವರು ತಮ್ಮ ಅರಮನೆಯ ಆವರಣದಲ್ಲೇ ಕೊಲ್ಲಲ್ಪಟ್ಟರು. ಅವರ ದೇಹದ ಚಿತ್ರವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುತಿಸಿದ್ದಾರೆ.

ಇರಾನ್ ನ ಪರಮಾಣು ಚಟುವಟಿಕೆಗಳು ವಿಶ್ವಕ್ಕೆ ಬೆದರಿಕೆಯಾಗಿದೆ. ಹೀಗಾಗಿ ಇರಾನ್ ವಿರುದ್ಧ ಮಿಲಿಟರಿ ಕ್ರಮ ಅಗತ್ಯವಾಗಿತ್ತು. ಇದು ಅಮೆರಿಕನ್ ಜನರನ್ನು ರಕ್ಷಿಸಲು ಮಾಡಲಾಗಿದೆ ಎಂದು ಹೇಳಿರುವ ಡೊನಾಲ್ಡ್ ಟ್ರಂಪ್, ಇರಾನ್ ಜೊತೆ ಮಾತುಕತೆ ನಡೆಸುವುದು ಈಗ ಹೆಚ್ಚು ಸುಲಭ ಎಂದು ಹೇಳಿದರು.

ಅಯತೊಲ್ಲಾ ಅಲಿ ಖಮೇನಿ ಹತ್ಯೆ: ಇರಾನ್‌ನ ಸರ್ವೋಚ್ಚ ನಾಯಕನ ಉತ್ತರಾಧಿಕಾರಿ ಯಾರು?

1989ರಿಂದ ಅಧಿಕಾರದಲ್ಲಿರುವ ಖಮೇನಿ ಇತಿಹಾಸದ ಅತ್ಯಂತ ದುಷ್ಟ ಜನರಲ್ಲಿ ಒಬ್ಬರಾಗಿದ್ದರು. ಅವರ ಹತ್ಯೆಯು ಇರಾನ್ ಜನರಿಗೆ ಮಾತ್ರವಲ್ಲ ಅಮೆರಿಕನ್ನರಿಗೆ, ಪ್ರಪಂಚದಾದ್ಯಂತ ಇರುವ ಅನೇಕ ದೇಶಗಳ ಜನರಿಗೆ ದೊರೆತ ನ್ಯಾಯವಾಗಿದೆ ಎಂದು ತಿಳಿಸಿದ್ದಾರೆ.

ಖಮೇನಿ ಬಳಿಕ ಉತ್ತರಾಧಿಕಾರಿ ಯಾರೆಂದು ಖಮೇನಿ ಗುರುತಿಸಿಲ್ಲ. ಆದರೆ ನಿಖರವಾಗಿ ಯಾರಾಗಬಹುದು ಎಂಬುದು ನಾಣಂಗೆ ತಿಳಿದಿದೆ. ಈ ಬಗ್ಗೆ ನಾನು ಹೇಳಲಾರೆ. ಕೆಲವು ಒಳ್ಳೆಯ ಅಭ್ಯರ್ಥಿಗಳು ಇದ್ದಾರೆ ಎಂದರು.