ದುಬೈ ಏರ್‌ಪೋರ್ಟ್ ಮೇಲೆ ಇರಾನ್ ದಾಳಿ; ಡ್ರೋನ್ ಪ್ರತಾಪ್ ಸೇರಿ 150 ಕ್ಕೂ ಹೆಚ್ಚು ಕನ್ನಡಿಗರು ನಿಲ್ದಾಣದಲ್ಲೇ ಲಾಕ್!
ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶ ತಾತ್ಕಾಲಿಕವಾಗಿ ಮುಚ್ಚಿರುವುದರಿಂದ ಗಲ್ಫ್ ರಾಷ್ಟ್ರಗಳಲ್ಲಿ ಅನೇಕರ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ದಾಳಿ ನಡೆಸುತ್ತಿದ್ದು, ದುಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದೆ.
ಸಂಗ್ರಹ ಚಿತ್ರ -
ದುಬೈ: ಇರಾನ್-ಇಸ್ರೇಲ್ (US-Israel Attacks on Iran) ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶ ತಾತ್ಕಾಲಿಕವಾಗಿ ಮುಚ್ಚಿರುವುದರಿಂದ ಗಲ್ಫ್ ರಾಷ್ಟ್ರಗಳಲ್ಲಿ ಅನೇಕರ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ದಾಳಿ ನಡೆಸುತ್ತಿದ್ದು, ದುಬೈನ (Dubai International Airport) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದೆ. ದುಬೈನಲ್ಲಿರೋ ಕನ್ನಡಿಗರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಸೇರಿದಂತೆ 150ಕ್ಕೂ ಹೆಚ್ಚು ಕನ್ನಡಿಗರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದುಬೈಗೆ ತೆರಳುವ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಲಕ್ಷಾಂತರ ಪ್ರಯಾಣಿಕರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಅದರಲ್ಲಿ ಕರ್ನಾಟಕ 150 ಮಂದಿ ಕೂಡ ದುಬೈನಲ್ಲೇ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ದುಬೈನಲ್ಲಿ ವಿದ್ಯಾರ್ಥಿಗಳು ಸೇರಿ 150 ಹೆಚ್ಚು ಕನ್ನಡಿಗರು ಸಿಲುಕಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಅವರೆಲ್ಲಾ ಸಂಪರ್ಕಿಸಿ ಸುರಕ್ಷಿತವಾಗಿ ಕರೆತರುವ ಪ್ರಯತ್ನ ಮುಂದುವರೆದಿದೆ. ಚಿಕ್ಕಬಳ್ಳಾಪುರ ಮೂಲದ ವಿದ್ಯಾರ್ಥಿಗಳು ದುಬೈನಲ್ಲಿ ಸಿಲುಕಿರುವ ಮಾಹಿತಿ ಇದೆ. ಸದ್ಯ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು.
ದುಬೈ ವಿಮಾನ ನಿಲ್ದಾಣದ ಮೇಲೆ ದಾಳಿ
ಯುಎಇಯ ಅಬುಧಾಬಿಯಲ್ಲಿರುವ ಜಾಯೆದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಅತ್ಯಂತ ಜನ ಪ್ರಯಾಣಿಸುವ ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ನಡೆಸಿದೆ. ಇರಾನ್ ಮೇಲೆ ಅಮೆರಿಕ ನಡೆಸಿದ ಕ್ಷಿಪಣಿ ದಾಳಿ ಮತ್ತು ನಂತರದ ದಿನಗಳಲ್ಲಿ ಈ ಪ್ರದೇಶದಲ್ಲಿನ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಪ್ರತಿದಾಳಿಗಳಿಂದಾಗಿ ಮಧ್ಯಪ್ರಾಚ್ಯದ ಒಳಗೆ ಮತ್ತು ಹೊರಗೆ ಹೋಗುವ ಅನೇಕ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಒಬ್ಬ ಏಷ್ಯಾದ ಪ್ರಜೆ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಮತ್ತು ದುಬೈ ವಿಮಾನ ನಿಲ್ದಾಣದಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Dubai Airports confirms that a concourse at Dubai International (DXB) sustained minor damage in an incident, which was quickly contained. Emergency response teams were immediately deployed and are managing the situation in coordination with the relevant authorities. Four staff…
— Dubai Media Office (@DXBMediaOffice) February 28, 2026
ಅಂತಾರರಾಷ್ಟ್ರೀಯ ಸಂಚಾರಕ್ಕೆ ವಿಶ್ವದ ಅತ್ಯಂತ ಜನನಿಬಿಡ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿಯ ನಂತರ ಹಾನಿಗೊಳಗಾಯಿತು. ಒಂದು ಕಾನ್ಕೋರ್ಸ್ ಹಾನಿಗೊಳಗಾಗಿದ್ದು, ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವಿಮಾನ ನಿಲ್ದಾಣದ ಹೇಳಿಕೆಯೊಂದು ತಿಳಿಸಿದ್ದು, ಟರ್ಮಿನಲ್‌ಗಳನ್ನು ಈ ಹಿಂದೆ ಪ್ರಯಾಣಿಕರಿಂದ ಮುಕ್ತಗೊಳಿಸಲಾಗಿತ್ತು ಎಂದು ತಿಳಿಸಿದೆ.