ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಫ್ಘಾನಿಸ್ತಾನದ ಮೇಲೆ ಮತ್ತೆ ದಾಳಿ ನಡೆಸಿದ ಪಾಕಿಸ್ತಾನ: ಮೂವರು ಸಾವು

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಫ್ಘಾನಿಸ್ತಾನದ ಕುನಾರ್ ಪ್ರಾಂತ್ಯದ ಮೇಲೆ ದಾಳಿಯಾಗಿದ್ದು, ಸುಮಾರು 45 ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯ ಕುರಿತಾಗಿ ಪಾಕಿಸ್ತಾನ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಅಫ್ಘಾನಿಸ್ತಾನದ ಸ್ಥಳೀಯ ಮಾಧ್ಯಮದಲ್ಲಿ ಈ ಕುರಿತು ವರದಿ ಪ್ರಸಾರ ಮಾಡಲಾಗಿದೆ.

ಅಫ್ಘಾನಿಸ್ತಾನದ ಮೇಲೆ ಮತ್ತೆ ದಾಳಿ ನಡೆಸಿದ ಪಾಕಿಸ್ತಾನ

ಸಂಗ್ರಹ ಚಿತ್ರ -

ಇಸ್ತಾನ್‌ಬುಲ್: ಅಫ್ಘಾನಿಸ್ತಾನದ (Afghanistan) ಮೇಲೆ ಮತ್ತೆ ದಾಳಿ (missile attack) ಪಾಕಿಸ್ತಾನ (Pakistan) ದಾಳಿ ನಡೆಸಿದೆ. ಇದರಿಂದ ಮೂವರು ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಈಶಾನ್ಯ ಅಫ್ಘಾನಿಸ್ತಾನದ ಕುನಾರ್ ಪ್ರಾಂತ್ಯದ (Kunar province ) ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದ್ದು, ಮಕ್ಕಳು, ಮಹಿಳೆಯರು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಸೋಮವಾರ ವರದಿ ಮಾಡಿದೆ. ಅಫ್ಘಾನ್ ಅಧಿಕಾರಿಗಳು ದಾಳಿಯ ಕುರಿತಾಗಿ ಹೇಳಿಕೆ ನೀಡಿದ್ದರೂ ಪಾಕಿಸ್ತಾನ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎನ್ನಲಾಗಿದೆ.

ಕಾಬೂಲ್ ಮೂಲದ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಕುನಾರ್ ಪ್ರಾಂತ್ಯದ ಮಾಹಿತಿ ಮತ್ತು ಸಂಸ್ಕೃತಿಯ ಮುಖ್ಯಸ್ಥ ನಜೀಬುಲ್ಲಾ ಹನೀಫ್, ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು ಮಹಿಳೆಯರು, ಮಕ್ಕಳು ಸೇರಿದಂತೆ 45 ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯ ಕುರಿತಾಗಿ ಇಸ್ಲಾಮಾಬಾದ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದರು.

ಜಾಗತಿಕ ತೈಲ ಸಂಕಷ್ಟ: ಇಂಧನ ಪೂರೈಕೆ ಆತಂಕದ ನಡುವೆ ಭಾರತದಲ್ಲಿ ಸ್ಥಿತಿ ಹೇಗಿದೆ?

ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಗಡಿಯಲ್ಲಿರುವ ಕುನಾರ್ ಪ್ರಾಂತ್ಯದ ಕೇಂದ್ರ ಭಾಗವಾದ ಅಸಾದಾಬಾದ್ ನಗರದಲ್ಲಿ ಈ ದಾಳಿಗಳು ನಡೆದಿವೆ ಎನ್ನಲಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳು ಕೆಲವು ಗಡಿ ಪ್ರದೇಶಗಳಲ್ಲಿ ಘರ್ಷಣೆಗಳು ಉಂಟಾಗಿತ್ತು. ಈ ವೇಳೆ ಎರಡೂ ಪಕ್ಷದವರ ಕಡೆಯಿಂದ ನೂರಾರು ನಾಗರಿಕರು, ಸೈನಿಕರು ಮತ್ತು ಉಗ್ರರು ಸಾವನ್ನಪ್ಪಿದ್ದರು.

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಮಾದಕವಸ್ತು ಪುನರ್ವಸತಿ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ಈ ವೇಳೆ 400 ಜನರು ಮೃತಪಟ್ಟಿದ್ದು, 250 ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ತಾಲಿಬಾನ್ ವಕ್ತಾರರು ತಿಳಿಸಿದ್ದರು. ಇದು ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿದ ಅತ್ಯಂತ ಮಾರಕ ದಾಳಿ ಎನ್ನಲಾಗಿದೆ.

ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ; ಐತಿಹಾಸಿಕ ಮೈಲಿಗಲ್ಲು ಎಂದ ಕ್ರಿಸ್ಟೋಫರ್ ಲಕ್ಸನ್

ಟರ್ಕಿ, ಸೌದಿ ಅರೇಬಿಯಾ ಮತ್ತು ಕತಾರ್‌ನಿಂದ ಮಾರ್ಚ್ 18ರಂದು ಮನವಿಗಳು ಬಂದ ಬಳಿಕ ಪ್ರಮುಖ ಮುಸ್ಲಿಂ ಹಬ್ಬಗಳಲ್ಲಿ ಒಂದಾದ ಈದ್ ಅಲ್ -ಫಿತರ್ ಮುನ್ನಾದಿನ ಕಾಬೂಲ್ ಮತ್ತು ಇಸ್ಲಾಮಾಬಾದ್ ಕದನ ವಿರಾಮವನ್ನು ಮಾಡಿದವು. ಇದರ ಬಳಿಕ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಅಧಿಕಾರಿಗಳು ಚೀನಾದ ವಾಯುವ್ಯ ಉರುಮ್ಕಿ ನಗರದಲ್ಲಿ ಬೀಜಿಂಗ್ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸುವ ಪ್ರಯತ್ನ ನಡೆಸಿತ್ತು.