ಪ್ರಧಾನಿ ಮೋದಿ 2 ದಿನಗಳ ಇಸ್ರೇಲ್ ಭೇಟಿ: ರಕ್ಷಣೆ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಇನ್ನಷ್ಟು ಸಹಕಾರಕ್ಕೆ ನೆತನ್ಯಾಹು ಜತೆ ಚರ್ಚೆ
ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಇಸ್ರೇಲ್ ಪ್ರವಾಸ ಮಾಡಲಿದ್ದು, ಈ ಸಂದರ್ಭದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ರಕ್ಷಣೆ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಇನ್ನಷ್ಟು ಸಹಕಾರಕ್ಕೆ ಹಾಗೂ ಕೃತಕ ಬುದ್ಧಿಮತ್ತೆ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಜಾಗತಿಕ ಭಯೋತ್ಪಾದನಾ ನಿಗ್ರಹದ ಕ್ರಮಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಈ ಕುರಿತು ಒಪ್ಪಂದ ನಡೆಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಸಂಗ್ರಹ ಚಿತ್ರ -
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಎರಡು ದಿನಗಳ ಇಸ್ರೇಲ್ (Israel) ಪ್ರವಾಸ ಮಾಡಲಿದ್ದು, ಈ ವೇಳೆ ಅವರು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ವಿಸ್ತರಿಸುವ ಮಾತುಕತೆಗೆ ಹೆಚ್ಚಿನ ಒತ್ತು ನೀಡಲಿದ್ದಾರೆ. ರಕ್ಷಣೆ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಇನ್ನಷ್ಟು ಸಹಕಾರಕ್ಕೆ ಹಾಗೂ ಕೃತಕ ಬುದ್ಧಿಮತ್ತೆ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಜಾಗತಿಕ ಭಯೋತ್ಪಾದನಾ ನಿಗ್ರಹಕ್ಕೆ ಕ್ರಮಗಳ ಕುರಿತು ಒಪ್ಪಂದ ನಡೆಸಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Prime Minister Benjamin Netanyahu) ಅವರೊಂದಿಗೆ ತೀವ್ರ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಇಸ್ರೇಲ್ ಸಂಸತ್ತು ನೆಸ್ಸೆಟ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ರಾಜತಾಂತ್ರಿಕ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 25 ಬುಧವಾರ ಟೆಲ್ ಅವೀವ್‌ಗೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಇಸ್ರೇಲ್ ಪ್ರವಾಸದಲ್ಲಿ ಅವರು ಉನ್ನತ ಮಟ್ಟದ ಮಾತುಕತೆಗಳಲ್ಲಿ ಭಾಗಿಯಾಗಲಿದ್ದಾರೆ. ಜೆರುಸಲೆಮ್‌ನಲ್ಲಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ತೀವ್ರ ಚರ್ಚೆ ನಡೆಸಲಿದ್ದಾರೆ.
ಪಾಕಿಸ್ತಾನಿಗಳಿಂದ ಕಿರುಕುಳ, ದಾಳಿ; 16 ವರ್ಷದಿಂದ ನಡೆಸುತ್ತಿದ್ದ ರೆಸ್ಟೋರೆಂಟ್ ಮುಚ್ಚಲು ನಿರ್ಧರಿಸಿದ ಭಾರತೀಯ
ಪ್ರಧಾನಿ ನರೇಂದ್ರ ಮೋದಿ ಅವರ ಈ ಭೇಟಿಯ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ರಾಯಭಾರಿ ಜೆ.ಪಿ ಸಿಂಗ್, ಇದೊಂದು ಐತಿಹಾಸಿಕ ಕ್ಷಣವಾಗಿದೆ. ಎರಡೂ ರಾಷ್ಟ್ರಗಳು ಈಗ ಜಾಗತಿಕ ಭಯೋತ್ಪಾದನೆ ನಿಗ್ರಹದ ಬಗ್ಗೆ ಏಕೀಕೃತ ನಿಲುವನ್ನು ಹಂಚಿಕೊಂಡಿವೆ ಎಂದು ತಿಳಿಸಿದ್ದಾರೆ.
ಎರಡು ರಾಷ್ಟ್ರಗಳ ನಡುವಿನ ಸಂಬಂಧವು ಕೇವಲ ಸಹಕಾರವನ್ನು ಹೊಂದಿಲ್ಲ. ಬದಲಾಗಿ ಪ್ರಾದೇಶಿಕ ಬಿಕ್ಕಟ್ಟುಗಳಿಂದಲೂ ಜೊತೆಯಾಗಿದೆ. ಇದು ಉನ್ನತ ತಂತ್ರಜ್ಞಾನ ಮತ್ತು ಭದ್ರತಾ ಏಕೀಕರಣದ ಹೊಸ ಹಂತಕ್ಕೆ ವೇದಿಕೆಯನ್ನು ಸಿದ್ಧಪಡಿಸಲಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಇಸ್ರೇಲ್ ಭೇಟಿಯಲ್ಲಿ ಇಸ್ರೇಲ್ ಸಂಸತ್ತು ನೆಸ್ಸೆಟ್ ಅನ್ನು ಉದ್ದೇಶಿಸಿ ಮಾಡುವ ಆವರ ಭಾಷಣದ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ. ಯಾಕೇಂದ್ರ ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಮಾತನಾಡುವ ಮೊದಲ ಭಾರತೀಯ ಪ್ರಧಾನಿಯಾಗಲಿದ್ದಾರೆ ಪ್ರಧಾನಿ ಮೋದಿ. ಇದೊಂದು ಹೆಗ್ಗುರುತು.
ಅನೇಕರು ಇದನ್ನು ಸಾಂವಿಧಾನಿಕ ಕ್ಷಣ ಎಂದು ಬಣ್ಣಿಸಿದರೆ, ಇನ್ನು ಕೆಲವರು ಪ್ರಜಾಪ್ರಭುತ್ವ ಒಗ್ಗಟ್ಟಿನ ಪ್ರಬಲ ಸಂಕೇತವೆಂದು ಮತ್ತು ಜಾಗತಿಕ ವೇದಿಕೆಯಲ್ಲಿ ಭಾರತದ ಬೆಳೆಯುತ್ತಿರುವ ಪ್ರಭಾವದ ಗುರುತಿಸುವಿಕೆ ಎಂದು ಹೇಳಿದ್ದಾರೆ.
ಇಸ್ರೇಲ್ ಭೇಟಿಯ ಎರಡನೇ ದಿನ ಪ್ರಧಾನಿ ಮೋದಿ ಅವರು ವಿಶ್ವ ಹತ್ಯಾಕಾಂಡದ ಸ್ಮರಣಾರ್ಥ ಕೇಂದ್ರವಾದ ಯಾದ್ ವಾಶೆಮ್‌ನಲ್ಲಿ ಗೌರವ ಸಲ್ಲಿಸಲಿದ್ದಾರೆ. ಹತ್ಯಾಕಾಂಡದ 1.5 ಮಿಲಿಯನ್ ಮಕ್ಕಳು ಸೇರಿದಂತೆ 4.8 ಮಿಲಿಯನ್ ಯಹೂದಿ ಬಲಿಪಶುಗಳನ್ನು ಸ್ಮರಿಸುವ "ಪುಸ್ತಕ ಹೆಸರುಗಳು" ಎಂಬ ಸ್ಮಾರಕ ದಾಖಲೆಯಲ್ಲಿ ಅವರು ಭಾಗವಹಿಸುವ ನಿರೀಕ್ಷೆ ಇದೆ.
ಬಳಿಕ ಇಸ್ರೇಲ್ ಅಧ್ಯಕ್ಷರಾದ ಐಸಾಕ್ ಹೆರ್ಜಾಗ್ ಅವರೊಂದಿಗೆ ಮಾತುಕತೆ ನಡೆಸಲಿದ್ದು, ಅನಂತರ ಪ್ರಧಾನಿ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಬಹು ಕಾರ್ಯತಂತ್ರದ ಒಪ್ಪಂದಗಳ ಕುರಿತು ಚರ್ಚೆ ನಡೆಯಲಿದೆ.
ಪಾಕಿಸ್ತಾನದ ದಾಳಿ; ಅಫ್ಘಾನಿಸ್ತಾನಕ್ಕೆ ಭಾರತದ ಬೆಂಬಲ
ಪ್ರಧಾನಿ ನರೇಂದ್ರ ಮೋದಿ ಅವರ ಇಸ್ರೇಲ್ ಭೇಟಿಯು ಭವಿಷ್ಯವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಹೊಸ ಪ್ರೋಟೋಕಾಲ್‌ಗಳಿಗೆ ಸಹಿ ಹಾಕುವುದು ಪ್ರಮುಖವಾಗಿದೆ. ಈ ಸಂದರ್ಭದಲ್ಲಿ ಕ್ವಾಂಟಮ್ ಕಂಪ್ಯೂಟಿಂಗ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಸೈಬರ್ ಸೆಕ್ಯುರಿಟಿ ಜೊತೆಗೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಸಹಯೋಗಗಳಿಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ. ಮಾತುಕತೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಟೆಲ್ ಅವಿವ್‌ನಿಂದ ನೇರವಾಗಿ ನವದೆಹಲಿಗೆ ಮರಳಲಿದ್ದಾರೆ.