ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narendra Modi: ಟ್ರಿನಿಡಾಡ್ ಮತ್ತು ಟೊಬಾಗೋದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೊದಲ ವಿದೇಶಿಗ ಎನಿಸಿಕೊಂಡ ಮೋದಿ

ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಟ್ರಿನಿಡಾಡ್ ಹಾಗೂ ಟೊಬೆಗೊಗೆ ಭೇಟಿ ನೀಡಿದ್ದಾರೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ರಿನಿಡಾಡ್ ಮತ್ತು ಟೊಬಾಗೊದ ಅತ್ಯುನ್ನತ ಗೌರವವಾದ ಆರ್ಡರ್ ಆಫ್ ದಿ ರಿಪಬ್ಲಿಕ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ಪಡೆದ ಮೊದಲ ವಿದೇಶಿ ನಾಯಕ ಮೋದಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮೋದಿಗೆ ಟ್ರಿನಿಡಾಡ್ ಮತ್ತು ಟೊಬಾಗೋದ ಅತ್ಯುನ್ನತ ನಾಗರಿಕ ಪ್ರಶಸ್ತಿ

Profile Vishakha Bhat Jul 4, 2025 9:38 PM

ಟೊಬಾಗೊ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ (Narendra Modi) ಅವರು ಟ್ರಿನಿಡಾಡ್ ಹಾಗೂ ಟೊಬೆಗೊಗೆ (Trinidad and Tobago) ಭೇಟಿ ನೀಡಿದ್ದಾರೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ರಿನಿಡಾಡ್ ಮತ್ತು ಟೊಬಾಗೊದ ಅತ್ಯುನ್ನತ ಗೌರವವಾದ ಆರ್ಡರ್ ಆಫ್ ದಿ ರಿಪಬ್ಲಿಕ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ಪಡೆದ ಮೊದಲ ವಿದೇಶಿ ನಾಯಕ ಮೋದಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು ಒಂದು ದೇಶದಿಂದ ಪ್ರಧಾನ ಮಂತ್ರಿಯವರಿಗೆ ದೊರೆತ 25 ನೇ ಗೌರವವಾಗಿದೆ. 'ದಿ ಆರ್ಡರ್ ಆಫ್ ದಿ ರಿಪಬ್ಲಿಕ್ ಆಫ್ ಟ್ರಿನಿಡಾಡ್ ಮತ್ತು ಟೊಬಾಗೊ' ಪ್ರಶಸ್ತಿಗೆ ಭಾಜನವಾಗಿರುವುದಕ್ಕೆ ಗೌರವವಿದೆ ಎಂದು ಮೋದಿ ಹೇಳಿದ್ದಾರೆ.

'ದಿ ಆರ್ಡರ್ ಆಫ್ ದಿ ರಿಪಬ್ಲಿಕ್ ಆಫ್ ಟ್ರಿನಿಡಾಡ್ ಮತ್ತು ಟೊಬಾಗೊ' ಪ್ರಶಸ್ತಿಗೆ ಭಾಜನರಾಗಿರುವುದು ಗೌರವ ತಂದಿದೆ. 140 ಕೋಟಿ ಭಾರತೀಯರ ಪರವಾಗಿ ನಾನು ಅದನ್ನು ಸ್ವೀಕರಿಸುತ್ತೇನೆ" ಎಂದು ಮೋದಿ ಹೇಳಿದ್ದಾರೆ. ಐದು ರಾಷ್ಟ್ರಗಳ ಪ್ರವಾಸದ ಎರಡನೇ ಹಂತದಲ್ಲಿ ಕೆರಿಬಿಯನ್ ದ್ವೀಪ ರಾಷ್ಟ್ರಕ್ಕೆ ಎರಡು ದಿನಗಳ ಭೇಟಿ ನೀಡಿರುವ ಮೋದಿಗೆ ಭಾರತೀಯ ವಲಸಿಗರೊಂದಿಗಿನ ಅವರ ಆಳವಾದ ಸಂಬಂಧ ಮತ್ತು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅವರ ಮಾನವೀಯ ಪ್ರಯತ್ನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.



ನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರು ಗುರುವಾರ ಈ ಘೋಷಣೆಯನ್ನು ಮಾಡಿದರು, ಮೋದಿಯವರ ಭೇಟಿಯನ್ನು ಹಂಚಿಕೊಂಡ ಹೆಮ್ಮೆ ಮತ್ತು ಐತಿಹಾಸಿಕ ಸಂಪರ್ಕದ ಕ್ಷಣ ಎಂದು ಬಣ್ಣಿಸಿದರು. 999 ರ ನಂತರ ಟ್ರಿನಿಡಾಡ್ ಮತ್ತು ಟೊಬಾಗೋಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.

ಟ್ರಿನಿಡಾಡ್ ಮತ್ತು ಟೊಬಾಗೋದ ಪ್ರಧಾನ ಮಂತ್ರಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರು ಪ್ರಧಾನಿ ಮೋದಿಯವರನ್ನು ಪಿಯಾರ್ಕೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮ ಇಡೀ ಸಚಿವ ಸಂಪುಟದೊಂದಿಗೆ ಸಾಂಪ್ರದಾಯಿಕ ಭಾರತೀಯ ಉಡುಪಿನಲ್ಲಿ ಸ್ವಾಗತಿಸಿದ್ದಾರೆ. ಈ ಪುಟ್ಟ ದ್ವೀಪ ರಾಷ್ಟ್ರದ ಜನಸಂಖ್ಯೆ ಕೇವಲ 13 ಲಕ್ಷ. ಅವರಲ್ಲಿ ಶೇ. 45 ರಷ್ಟು ಜನರು ಭಾರತೀಯ ಮೂಲದವರು, ಹೆಚ್ಚಾಗಿ ಬಿಹಾರ ಮತ್ತು ಉತ್ತರ ಪ್ರದೇಶದಿಂದ ಬಂದವರು. ಅವರ ಪೂರ್ವಜರಲ್ಲಿ ಹೆಚ್ಚಿನವರು ವಸಾಹತುಶಾಹಿ ಭಾರತದಿಂದ ಒಪ್ಪಂದದ ಕಾರ್ಮಿಕರಾಗಿ ಬಂದು ಇಲ್ಲಿ ನೆಲೆಸಿದ್ದಾರೆ.

ಈ ಸುದ್ದಿಯನ್ನೂ ಓದಿ: ‌M J Akbar Column: ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಅತಿದೊಡ್ಡ ಗಿಫ್ಟ್‌ ಇದು !

ಮೋದಿ ಅಲ್ಲಿನ ಪ್ರಧಾನಿ ಆಯೋಜಿಸಿದ್ದ ಔತಣ ಕೂಟದಲ್ಲಿ ಭಾಗವಹಿಸಿದ್ದರು. ಔತಣಕೂಟದ ಸಮಯದಲ್ಲಿ ಸೊಹಾರಿ ಎಲೆಯಲ್ಲಿ ಬಡಿಸುವ ಆಹಾರವು ಟ್ರಿನಿಡಾಡ್ ಮತ್ತು ಟೊಬಾಗೋದ ಜನರಿಗೆ ಹೆಚ್ಚಿನ ಸಾಂಸ್ಕೃತಿಕ ಮಹತ್ವದ್ದಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.