ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asim Munir: ಕಾಶ್ಮೀರವನ್ನು ಪಾಕಿಸ್ತಾನದಿಂದ ದೂರ ಮಾಡಲು ಸಾಧ್ಯವಿಲ್ಲ ; ವಿವಾದದ ಕಿಡಿ ಹೊತ್ತಿಸಿದ ಪಾಕ್‌ ಸೇನಾ ಮುಖ್ಯಸ್ಥ

ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್(Asim Munir) ಭಾರತ ಹಾಗೂ ಹಿಂದೂ ಧರ್ಮದ ಕುರಿತು ಕಿಡಿ ಕಾರಿದ್ದಾರೆ. ವಿದೇಶಗಳಲ್ಲಿ ನೆಲೆಸಿರುವ ಪಾಕಿಸ್ತಾನಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಜನರಲ್ ಮುನೀರ್, ದೇಶದ ರಾಯಭಾರಿಗಳು ಉನ್ನತ ಸಿದ್ಧಾಂತ ಮತ್ತು ಸಂಸ್ಕೃತಿ"ಗೆ ಸೇರಿದವರು ಎಂಬುದನ್ನು ಮರೆಯಬಾರದು ಎಂದು ಹೇಳಿದ್ದಾರೆ.

ಕಾಶ್ಮೀರವನ್ನು ಪಾಕಿಸ್ತಾನದಿಂದ ದೂರ ಮಾಡಲಾಗದು ; ಪಾಕ್‌ ಸೇನಾ ಮುಖ್ಯಸ್ಥ

Profile Vishakha Bhat Apr 17, 2025 1:16 PM

ಇಸ್ಲಾಮಾಬಾದ್‌: ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್(Asim Munir) ಭಾರತ ಹಾಗೂ ಹಿಂದೂ ಧರ್ಮದ ಕುರಿತು ಕಿಡಿ ಕಾರಿದ್ದಾರೆ. ವಿದೇಶಗಳಲ್ಲಿ ನೆಲೆಸಿರುವ ಪಾಕಿಸ್ತಾನಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಜನರಲ್ ಮುನೀರ್, ದೇಶದ ರಾಯಭಾರಿಗಳು ಉನ್ನತ ಸಿದ್ಧಾಂತ ಮತ್ತು ಸಂಸ್ಕೃತಿ"ಗೆ ಸೇರಿದವರು ಎಂಬುದನ್ನು ಮರೆಯಬಾರದು ಎಂದು ಹೇಳಿದರು. ಅವರ ಭಾಷಣದಲ್ಲಿ ಇಸ್ಲಾಂ, ಮೆಕ್ಕಾ-ಮದೀನಾ ಈ ವಿಚಾರಗಳ ಬಗ್ಗೆಯೇ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಕಾಶ್ಮೀರವು ಇಸ್ಲಾಮಾಬಾದ್‌ನ "ಕತ್ತಿನ ರಕ್ತನಾಳ" ಮತ್ತು ಹಾಗೆಯೇ ಇರುತ್ತದೆ ಮತ್ತು ಪಾಕಿಸ್ತಾನ "ಅದನ್ನು ಮರೆಯುವುದಿಲ್ಲ" ಎಂದು ಹೇಳಿದ್ದಾರೆ.

ಇಸ್ಲಾಮಾಬಾದ್​ನಲ್ಲಿ ನಡೆದ ಮೊದಲ ಸಾಗರೋತ್ತರ ಪಾಕಿಸ್ತಾನಿ ಸಮ್ಮೇಳನದಲ್ಲಿ ಧರ್ಮೋಪದೇಶಗಳನ್ನು ನೀಡಿದ್ದಾರೆ. ಸಮ್ಮೇಳನದಲ್ಲಿ ಪ್ರಧಾನಿ ಶಹಬಾಜ್ ಷರೀಫ್ ಸೇರಿದಂತೆ ಪಾಕಿಸ್ತಾನದ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ದರು. ‘‘ಕೇವಲ 1500 ಭಯೋತ್ಪಾದಕರು ದೇಶದ ಭವಿಷ್ಯವನ್ನು ಬದಲಾಯಿಸುತ್ತಾರೆ ಎಂದು ಪಾಕಿಸ್ತಾನದ ಶತ್ರುಗಳು ಭಾವಿಸುತ್ತಾರಾ? ನಾವು ಶೀಘ್ರದಲ್ಲೇ ಈ ಭಯೋತ್ಪಾದಕರ ಬೆನ್ನು ಮುರಿಯುತ್ತೇವೆ. 13 ಲಕ್ಷ ಜನರ ಭಾರತೀಯ ಸೇನೆಗೆ ನಮ್ಮನ್ನು ಹೆದರಿಸಲು ಸಾಧ್ಯವಾಗಲಿಲ್ಲ, ಈ ಭಯೋತ್ಪಾದಕರು ಏನು ಮಾಡುತ್ತಾರೆ? ಎಂದು ಹೇಳಿದ್ದಾರೆ.



ಸ್ವಾತಂತ್ರ್ಯಕ್ಕೂ ಮುಂಚಿನ ವರ್ಷಗಳಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ರಾಜ್ಯವನ್ನು ಕೋರುವ ಚಳುವಳಿಗೆ ಎರಡು ರಾಷ್ಟ್ರಗಳ ಸಿದ್ಧಾಂತವು ಆಧಾರವಾಗಿತ್ತು. ಈ ಚಳುವಳಿಯ ನೇತೃತ್ವವನ್ನು ಪಾಕಿಸ್ತಾನದ ಮೊದಲ ಗವರ್ನರ್ ಜನರಲ್ ಆದ ಮುಹಮ್ಮದ್ ಅಲಿ ಜಿನ್ನಾ ವಹಿಸಿದ್ದರು. ಎರಡು ರಾಷ್ಟ್ರಗಳ ಸಿದ್ಧಾಂತವು ಭಾರತ ಮತ್ತು ಪಾಕಿಸ್ತಾನ ಹಂಚಿಕೊಳ್ಳುವ ಸಾಮಾನ್ಯ ಇತಿಹಾಸ ಮತ್ತು ಪರಂಪರೆಯ ಕಲ್ಪನೆಗೆ ವಿರುದ್ಧವಾಗಿದೆ ಮತ್ತು ಜಾತ್ಯತೀತತೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. , ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು ಎಂದು ಹೇಳಿದರು. "ನಾವು ಒಂದೇ ರಾಷ್ಟ್ರವಲ್ಲ. ಅದಕ್ಕಾಗಿಯೇ ನಮ್ಮ ಪೂರ್ವಜರು ಈ ದೇಶವನ್ನು ರಚಿಸಲು ಹೋರಾಡಿದರು. ನಮ್ಮ ಪೂರ್ವಜರು ಮತ್ತು ನಾವು ಈ ದೇಶದ ಸೃಷ್ಟಿಗೆ ಸಾಕಷ್ಟು ತ್ಯಾಗ ಮಾಡಿದ್ದೇವೆ. ಅದನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಮಗೆ ತಿಳಿದಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Murder Case: ಪಾಕಿಸ್ತಾನಿ ಪ್ರಜೆಯಿಂದ ದಾಳಿ: ದುಬೈನಲ್ಲಿ ತೆಲಂಗಾಣ ಮೂಲದ ಇಬ್ಬರು ವ್ಯಕ್ತಿಗಳ ಹತ್ಯೆ

ಕಾಶ್ಮೀರದ ಬಗ್ಗೆ ಮಾತನಾಡಿದ ಜನರಲ್ ಮುನೀರ್, "ನಮ್ಮ ನಿಲುವು ಸಂಪೂರ್ಣವಾಗಿ ಸ್ಪಷ್ಟವಾಗಿದೆ, ಅದು ನಮ್ಮ ಕುತ್ತಿಗೆಯ ರಕ್ತನಾಳವಾಗಿತ್ತು, ಅದು ನಮ್ಮ ಕುತ್ತಿಗೆಯ ರಕ್ತನಾಳವಾಗಿರುತ್ತದೆ, ನಾವು ಅದನ್ನು ಮರೆಯುವುದಿಲ್ಲ. ನಾವು ನಮ್ಮ ಕಾಶ್ಮೀರಿ ಸಹೋದರರನ್ನು ಅವರ ವೀರೋಚಿತ ಹೋರಾಟದಲ್ಲಿ ಬಿಡುವುದಿಲ್ಲ" ಎಂದು ಹೇಳಿದ್ದಾರೆ. ಈ ಕುರಿತು ಭಾರತದ ವಿದೇಶಾಂಗ ಇಲಾಖೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.