About Us Advertise with us Be a Reporter E-Paper

Breaking Newsರಾಜ್ಯ
Trending

ಗುಡ್ಡಕ್ಕೆ ಬೆಂಕಿ: 15 ಎಕರೆ ಪ್ರದೇಶ ಧಗಧಗ

ಮಂಗಳೂರು: ಗುಡ್ಡಕ್ಕೆ ಬೆಂಕಿ ಬಿದ್ದ ಪರಿಣಾಮ ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದು, 15 ಎಕರೆ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ಹಬ್ಬಿದೆ. ಈ ಘಟನೆ ಗುರುವಾರ ರಾತ್ರಿ ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿ ನಡೆದಿದೆ.

ದುಷ್ಕರ್ಮಿಗಳು ಮಾಣಿಪಲ್ಲ ಎಂಬಲ್ಲಿನ ಗುಡ್ಡದ ಪೊದೆ ತೆಗೆಯುವುದಕ್ಕಾಗಿ ಸಂಜೆ ಹೊತ್ತಿಗೆ ಬೆಂಕಿ ಹಚ್ಚಿದ್ದರು. ಆದರೆ ಬೆಂಕಿಯ ಕೆನ್ನಾಲಿಗೆ ಹರಡುತ್ತಾ ಇಡೀ ಗುಡ್ಡಕ್ಕೆ ಆವರಿಸಿದೆ. ಇದರಿಂದಾಗಿ ಆಸುಪಾಸಿನ ಸುಮಾರು 45 ಮನೆ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ಅಲ್ಲಿಯೇ ಹತ್ತಿರ ಇದ್ದ ಪೆಟ್ರೋಲ್ ಪಂಪ್‍ನ್ನು ಬಂದ್ ಮಾಡಲಾಗಿತ್ತು. ಅಗ್ನಿಶಾಮಕ ಸಿಬಂದಿ ಮತ್ತು ಸ್ಥಳೀಯರು ಸೇರಿ ಕಾರ್ಯಾಚರಣೆ ನಡೆಸಿದ್ದು, ತಡರಾತ್ರಿವರೆಗೂ ಬೆಂಕಿಯ ಕೆನ್ನಾಲಿಗೆ ಹರಡಿಕೊಂಡಿತ್ತೆಂದು ಸ್ಥಳೀಯರು ತಿಳಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close