About Us Advertise with us Be a Reporter E-Paper

Breaking Newsದೇಶಪ್ರಚಲಿತ

ನಕ್ಸಲರ ಸ್ಫೋಟಕ್ಕೆ ನಾಲ್ವರು ಬಿಎಸ್‌ಎಫ್ ಯೋಧರು ಗಾಯ

ರಾಯಪುರ್: ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಸುಧಾರಿತ ಸ್ಫೋಟಕ ಸಾಮಗ್ರಿ ಐಇಡಿ ಸ್ಫೋಟಗೊಂಡ ಪರಿಣಾಮ ನಾಲ್ವರು ಬಿಎಸ್‌ಎಫ್ ಯೋಧರು ಸೇರಿದಂತೆ ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಬುಧವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಪ್ರಕರಣ ನಡೆದಿದೆ. ನಕ್ಸಲರು ಸ್ಫೋಟಕ ವಸ್ತು ಅಥವಾ ಐಇಡಿಯಿಂದ ಸ್ಫೋಟಗೊಳಿಸಿರಬಹುದು ಎಂದು ಊಹಿಸಲಾಗಿದೆ. ಈ ಘಟನೆಯಲ್ಲಿ ಜಿಲ್ಲಾ ಮೀಸಲು ಭದ್ರತಾ ಪಡೆಯ ಒಬ್ಬರು, ಬಿಎಸ್‌ಎಫ್‌ನ 414ನೇ ಬೆಟಾಲಿಯನ್‌ಗೆ ಸೇರಿದ ನಾಲ್ವರು ಸಿಬ್ಬಂದಿ ಹಾಗೂ ನಾಗರೀಕರೊಬ್ಬರು ಗಾಯಗೊಂಡಿದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸುಂದರ್ ರಾಜ್ ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳದಲ್ಲಿ ಭದ್ರತಾಪಡೆ ಕಾರ್ಯಾಚರಣೆ ಮುಂದುವರಿಸಿದೆ ಎಂದು ಬಿಎಸ್‌ಎಫ್ ತಿಳಿಸಿದೆ.

Tags

Related Articles

Leave a Reply

Your email address will not be published. Required fields are marked *

Language
Close