About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ತೈಲ ದರ ಏರಿಕೆ ಖಂಡಿಸಿ ವಿಪಕ್ಷಗಳಿಂದ ಸೆ.10ಕ್ಕೆ ಭಾರತ್ ಬಂದ್‍ಗೆ ಕರೆ

ದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಇಂಧನ ದರ ಖಂಡಿಸಿ ಸೆಪ್ಟೆಂಬರ್ 10ರಂದು ಭಾರತ ಬಂದ್ ಗೆ ಕರೆ ನೀಡಲು ಕಾಂಗ್ರೆಸ್ ಸೇರಿ ಹಲವು ವಿಪಕ್ಷಗಳು ನಿರ್ಧರಿಸಿವೆ.

ಅದೇ ದಿನ ಎಡಪಕ್ಷಗಳು ಬಂದ್‍ಗೆ ಪ್ರತ್ಯೇಕ ಕರೆ ನೀಡಿದ್ದರೂ, ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಕೇಂದ್ರ ಸರಕಾರದ ವಿರುದ್ಧ ರಸ್ತೆ ಪ್ರತಿಭಟನೆ ನಡೆಸಲಿದೆ ಎನ್ನಲಾಗಿದೆ. ಆದರೆ ಯಾವುದೇ ರೀತಿಯ ಬಂದ್ ಮಾಡಲು ತೀರ್ಮಾನ ತೆಗೆದುಕೊಂಡಿಲ್ಲ. ಭಾರತ್ ಬಂದ್‍ ನಡೆಸಲು ತೀರ್ಮಾನಿಸಿರುವ ಕಾಂಗ್ರೆಸ್, ಎಲ್ಲ ಪ್ರತಿಪಕ್ಷಗಳು, ಸಾಮಾಜಿಕ ಸಂಘಟನೆಗಳು, ಎನ್‌ಜಿಒಗಳು ಬಂದ್‌ನಲ್ಲಿ ಭಾಗವಹಿಸುವಂತೆ ಕಾಂಗ್ರೆಸ್‌ ಮನವಿ ಮಾಡಿದೆ.

ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ದರಗಳ ಏರಿಕೆಯಿಂದ ಜನ ಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದು, ಬಂದ್‌ ಮೂಲಕ ಪ್ರತಿಭಟಿಸಬೇಕಾಗಿದೆ ಎಂದು ಕಾಂಗ್ರೆಸ್‌ ವಕ್ತಾರ ರಣ್‌ದೀಪ್‌ ಸುರ್ಜೇವಾಲಾ ತಿಳಿಸಿದ್ದಾರೆ. ಕೇಂದ್ರ ಸರಕಾರ ತಕ್ಷಣವೇ ಅಬಕಾರಿ ಸುಂಕ ಇಳಿಸಬೇಕು ಹಾಗೂ ರಾಜ್ಯಗಳು ವ್ಯಾಟ್‌ ತಗ್ಗಿಸಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ನ್ನು ಜಿಎಸ್‌ಟಿಗೆ ಒಳಪಡಿಸಬೇಕು ಎಂದು ಕೂಡ ಅವರು ಒತ್ತಾಯಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close