About Us Advertise with us Be a Reporter E-Paper

Breaking Newsಕ್ರೀಡೆದೇಶ
Trending

ಹೆಣ್ಣುಮಗುವಿಗೆ ತಂದೆಯಾದ ಕ್ರಿಕೆಟಿಗ ರೋಹಿತ್ ಶರ್ಮಾ

ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಫೋಟಕ ಆಟಗಾರ ರೋಹಿತ್ ಶರ್ಮಾ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ.

ರೋಹಿತ್ ಪತ್ನಿ ರಿತಿಕಾ ಮುಂಬೈನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ನೀಡಿದ್ದು, ರೋಹಿತ್ ಶರ್ಮಾ ಮತ್ತು ರಿತಿಕಾ ಅವರಿಗೆ ಶುಭಾಶಯ ಕೋರಿದೆ.

ಈ ಸುದ್ದಿ ತಿಳಿಯುತ್ತಿದಂತೆ ಕುಟುಂಬದೊಂದಿಗೆ ಕಾಲ ಕಳೆಯಲು ಇಚ್ಛಿಸಿರುವ ರೋಹಿತ್ ಆಸ್ಟ್ರೇಲಿಯಾದಿಂದ ತವರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಇದೇ ಜನವರಿ 3ರಿಂದ ಆರಂಭವಾಗಲಿರುವ ಸಿಡ್ನಿ ಟೆಸ್ಟ್ ಗೆ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ.

ಭಾನುವಾರವಷ್ಟೇ ಮೆಲ್ಬೋರ್ನ್ ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿತ್ತು. ಇನ್ನು ರೋಹಿತ್ ಶರ್ಮಾ ಅಲಭ್ಯತೆಯಿಂದ ತೆರವಾಗುವ ಜಾಗಕ್ಕೆ ಹಾರ್ದಿಕ್ ಪಾಂಡ್ಯಾ ಸ್ಥಾನ ತುಂಬುವ ಸಾಧ್ಯತೆ ಇದೆ.

2017ರ ಡಿಸೆಂಬರ್13 ರಂದು ರೋಹಿತ್ ಶರ್ಮಾ ಮತ್ತು ರಿತಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close