Breaking Newsದೇಶ
ಸರಕಾರಿ ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸರಕಾರಿ ಶಾಲೆಯೊಂದರಲ್ಲಿ 2ನೇ ತರಗತಿ ಬಾಲಕಿ ಮೇಲೆ ಎಲೆಕ್ಟ್ರಿಶಿಯನ್ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿ ಬಂದಿದೆ.
ಶಾಲೆಯಿಂದ ಮನೆಗೆ ಹಿಂತಿರುಗಿದ ಬಳಿಕ ಬಾಲಕಿ ತನ್ನ ಪೋಷಕರಿಗೆ ವಿವರಿಸಿದಾಗ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ಎನ್ಡಿಎಂಸಿ ಶಾಲೆಯಲ್ಲಿ ಎಲೆಕ್ಟ್ರೀಶಿಯನ್ ಆಗಿರುವ ರಾಮ್ ಅಸ್ರೆ(37) ಅತ್ಯಾಚಾರಗೈದ ಆರೋಪಿ. ಈತ ಶಾಲೆಯಲ್ಲಿ ಖಾಯಂ ನೌಕರನಾಗಿ ಕೆಲಸ ಮಾಡುತ್ತಿದ್ದ.
ಆರೋಪಿ ರಾಮ್ ಅಸ್ರೆಯನ್ನು ಬಂಧಿಸಿದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊನ್ನೆಯಷ್ಟೇ ದೇಶದಲ್ಲಿ ಪ್ರತಿ ಆರು ಗಂಟೆಗೊಮ್ಮೆ ಹೆಣ್ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ನಡೆಯುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು.