About Us Advertise with us Be a Reporter E-Paper

Breaking Newsಪ್ರಚಲಿತವಿದೇಶ

IMFನ ಮೊದಲ ಮಹಿಳಾ ಮುಖ್ಯ ಆರ್ಥಿಕ ತಜ್ಞೆಯಾಗಿ ಕನ್ನಡತಿ ಗೀತಾ ಗೋಪಿನಾಥ್‌ ನೇಮಕ

ಜಾಗತೀಕರಣದಿಂದಾಗಿ ಆರ್ಥಿಕ ಹಿನ್ನಡೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಐಎಂಎಫ್‌‌‌ನ ಮುಖ್ಯ ಆರ್ಥಿಕ ತಜ್ಞರಾಗಿ ಅಧಿಕಾರ ವಹಿಸಿಕೊಂಡಿರುವ  ಗೀತಾ ಗೋಪಿನಾಥ್‌ ಅವರ ಮುಂದೆ ಸಹಜವಾಗಿಯೇ ಸವಾಲುಗಳು ಮತ್ತು ನಿರೀಕ್ಷೆಗಳು ಹೆಚ್ಚಾಗಿವೆ.

ಡಿ. 8, 1971ರಲ್ಲಿ ಮೈಸೂರಿನಲ್ಲಿ ಜನಿಸಿದ ಗೀತಾ ಗೋಪಿನಾಥ್‌ ಅವರು ಮೈಸೂರಿನ ನಿರ್ಮಲಾ ಕಾನ್ವೆಂಟ್‌ನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿದರು. ಟಿ ವಿ ಗೋಪಿನಾಥ್‌ ಮತ್ತು ವಿ ಸಿ ವಿಜಯಲಕ್ಷ್ಮಿ ಅವರ ಇಬ್ಬರು ಪುತ್ರಿಯರಲ್ಲಿ ಇವರು ಕಿರಿಯರು. ಅಪ್ಪ – ಅಮ್ಮ ಮೂಲತಃ ಕೇರಳದವರಾಗಿದ್ದು, ಮೈಸೂರಿನಲ್ಲಿ ನಲೆಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಮಹಿಳಾ ಶ್ರೀರಾಮ ಕಾಲೇಜಿನಲ್ಲಿ 1992ರಲ್ಲಿ ಪದವಿ ಪಡೆದ ಇವರು ದೆಹಲಿ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಾಷಿಂಗ್ಟನ್‌ ವಿಶ್ವವಿದ್ಯಾಲಯದಲ್ಲಿ ಎಂಎ ಮುಗಿಸಿದ ಬಳಿಕ 2001ರಲ್ಲಿ ಪ್ರಿನ್ಸ್ಟನ್‌ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಪದವಿಯನ್ನು ಪೂರ್ಣಗೊಳಿಸಿದ್ದಾರೆ.

ಸದ್ಯ ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾನಿಲಯದಲ್ಲಿ ಇಂಟರ್‌‌‌‌ನ್ಯಾಷನಲ್ ಸ್ಟಡೀಸ್ ಮತ್ತು ಎಕನಾಮಿಕ್ಸ್ ವಿಭಾಗದಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದಾರೆ. 2016ರಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಹಣಕಾಸು ಸಲಹೆಗಾರರಾಗಿ ನೇಮಕಗೊಂಡಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close