ನಾಳೆ ಬೆಳಿಗ್ಗೆ 9ಕ್ಕೆ ಯಡಿಯೂರಪ್ಪ ಪ್ರಮಾಣ ವಚನ : ಬಹುಮತ ಸಾಬೀತು ಪಡಿಸಲು 15 ದಿನಗಳ ಕಾಲಾವಕಾಶ

Posted In : ರಾಜ್ಯ

ಬೆಂಗಳೂರು: ಸರಕಾರ ರಚಸಲು, 104 ಸ್ಥಾನಗಳೊಂದಿಗೆ ಅತೀ ದೊಡ್ಡ ಪಕ್ಷವಾದ ಬಿಜೆಪಿಗೆ ರಾಜ್ಯಪಾಲ ವಾಜೂಭಾಯಿ ರೂಢಭಾಯಿ ವಾಲ ಅಹ್ವಾನ ನೀಡಿದ್ದಾರೆ.

ನಿನ್ನೆ ಬಂದ ವಿಧಾನ ಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿಗೆ 104, ಕಾಂಗ್ರೆಸ್ ಹಾಗೂ ಜೆಡಿಎಸ್ ಕ್ರಮವಾಗಿ 78 ಹಾಗೂ 38 ಸ್ಥಾನಗಳು ಪಡೆದು ಅತಂತ್ರ ವಿಧಾನಸಭೆ ಸೃಷ್ಟಿಯಾಗಿತ್ತು. ಈವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಲು ಬೇಕಾದ ಬಹುಮತ ಇದೆ ಎಂದು ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿದ್ದರು.

ನಿನ್ನೆಯಿಂದ ನಡೆಯುತ್ತಿರುವ ಹೈ ಡ್ರಾಮಕ್ಕೆ ತೆರೆ ಬಿದಿದ್ದು, ಈಗ ರಾಜ್ಯಪಾಲ ಬಿಜೆಪಿಗೆ ಸರಕಾರ ರಚಿಸುವಂತೆ ಆಹ್ವಾನ ನೀಡಿದ್ದಾರೆ. ನಾಳೆ ಬೆಳಿಗ್ಗೆ  9:00 ಘಂಟೆಗೆ ಬಿಎಸ್ವೈ ಪ್ರಮಾಣ ವಚನ ಸ್ವೀಕರಿಸಲಿದ್ದು, ಬಹುಮತ ಸಾಬೀತು ಪಡಿಸಲು 15 ದಿನಗಳ ಕಾಲಾವಕಾಶ ನೀಡಿದ್ದಾರೆ ಎಂದು ರಾಜ್ಯ ಬಿಜೆಪಿಯ ಮುರಳೀಧರ ರಾವ್‌ ತಿಳಿಸಿದರು.

Leave a Reply

Your email address will not be published. Required fields are marked *

sixteen − six =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top