About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಹರಿಯಾಣದಲ್ಲಿ ವರುಣನ ಅಬ್ಬರ, ಸಾವಿರಾರು ಎಕರೆ ಜಮೀನು ಜಲಾವೃತ

ಕರ್ನಲ್: ಉತ್ತರ ಭಾರತದ ನಾಲ್ಕು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹರಿಯಾಣದಲ್ಲೂ ವರುಣನ ಆರ್ಭಟ ಜೋರಾಗಿದೆ.

ಭಾರಿ ಮಳೆಯಾಗುತ್ತಿರುವುದರ ಪರಿಣಾಮ ಯುಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕರ್ನಲ್​ ಜಿಲ್ಲೆಯ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ. ಇದರಿಂದ ರೈತರು ಬೆಳೆದಿದ್ದ ಸಾವಿರಾರು ಎಕರೆ ಜಮೀನು ಜಲಾವೃತಗೊಂಡಿದ್ದು, ಬೆಳೆಗಳು ನಾಶವಾಗಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ನೀರು ತುಂಬಿರೋದ್ರಿಂದ ನಾವು ಬೆಳೆದ ಬೆಳೆ ಪೂರ್ತಿ ನಾಶವಾಗಿದೆ. ಜಾನುವಾರುಗಳಿಗೆ ಮೇವು ಇಲ್ಲದಂತಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಇನ್ನು ಕಳೆದ ಎರಡ್ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಯಮುನಾ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಜಿಲ್ಲಾಡಳಿತ ಅಪಾಯದ ಮುನ್ಸೂಚನೆ ಕೊಟ್ಟ ಕೂಡಲೇ ರೈತರು ಸುರಕ್ಷಿತ ಸ್ಥಳಗಳತ್ತ ತೆರಳಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close