About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾದ ಹರಿಯಾಣಾ ಸಾಮೂಹಿಕ ಅತ್ಯಾಚಾರ ಕಾಂಡ

ದೆಹಲಿ: 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾದ ಬಳಿಕ ಹರಿಯಾಣಾದಲ್ಲಿ ರಾಜಕೀಯ ಕೆಸರೆರಚಾಟ ಆರಂಭವಾಗಿದೆ.

ಹರಿಯಾಣಾದ ಮಹೇಂದ್ರಘಡದಲ್ಲಿ ಮೂರು ಮಂದಿ ಹದಿಹರೆಯದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರಗೈದಿದ್ದರು. ಈ ವಿಚಾರವಾಗಿ ಮಾತನಾಡದಿದ್ದ ಮಾಜಿ ಮುಖ್ಯಮಂತ್ರಿ ಹಾಗು ಕಾಂಗ್ರೆಸ್‌ ನಾಯಕ ಭೂಪಿಂದರ್‌ ಸಿಂಗ್‌ ಹೂಡಾ, ಬಿಜೆಪಿ ಸರಕಾರದ ಅವಧಿಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಆಗುತ್ತಿಲ್ಲ ಎಂದು ಆಪಾದನೆ ಮಾಡಿದ್ದಾರೆ.

ಕೋಚಿಂಗ್‌ ಕೇಂದ್ರದಿಂದ ಮನೆಗೆ ತೆರಳುತ್ತಿದ್ದ ವೇಳೆ ತನ್ನನ್ನು ಭೇಟಿಯಾದ ಮೂರು ಮಂದಿ, ಮಾದಕ ದ್ರವ್ಯವಿದ್ದ  ನೀರಿನ ಬಾಟಲಿ ಕೊಟ್ಟು, ಮತ್ತು ಬರಿಸಿ, ಬಳಿಕ ತನ್ನನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಅತ್ಯಾಚಾರಗೈದಿದ್ದಾರೆ ಎಂದು ಯುವತಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಿಸಲಾಗಿದೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡದ ಮುಖ್ಯಮಂತ್ರಿ ಖಟ್ಟರ್‌, “ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

 

Tags

Related Articles

Leave a Reply

Your email address will not be published. Required fields are marked *

Language
Close