About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ಅದ್ಧೂರಿ ತೆರೆ

ಹಾಸನ: ಹಾಸನಾಂಬ ದೇವಿಯ ದೇವಾಲಯದ ಬಾಗಿಲು ತೆರೆದು 8 ದಿನಗಳು ಕಳೆದಿವೆ. ನವೆಂಬರ್ 1ರಿಂದ ನಿನ್ನೆವರೆಗೆ ಹಾಸನಾಂಬೆ ದೇವಿ ದರ್ಶನ ಕಲ್ಪಿಸಲಾಗಿತ್ತು. ಇಂದು ದೇವಿಯ ದರ್ಶನೋತ್ಸವಕ್ಕೆ ಅದ್ಧೂರಿ ತೆರೆ ಬೀಳಲಿದೆ.

ಇಂದು ಮಧ್ಯಾಹ್ನ 12.30ಕ್ಕೆ ಸರಿಯಾಗಿ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಿದೆ. ಮುಂದಿನ ವರ್ಷ ಇದೇ ಸಮಯಕ್ಕೆ ದೇವಾಲಯದ ಬಾಗಿಲು ತೆರೆಯಲಿದೆ.

ಇನ್ನು ಗುರುವಾರ ದೀಪಾವಳಿ ಹಬ್ಬವಾದ್ರಿಂದ ಹಿಂದಿನ ದಿನಗಳಿಗೆ ಹೋಲಿಸಿದರೆ ಭಾರಿ ಜನಸ್ತೋಮ ನೆರೆದಿತ್ತು. ಜಿಲ್ಲಾಡಳಿತದ ಮಾಹಿತಿಯ ಪ್ರಕಾರ ಎಂಟು ದಿನಗಳಲ್ಲಿ ಈವರೆಗೆ 3 ಲಕ್ಷಕ್ಕೂ ಅಧಿಕ ಮಂದಿ ದೇವಿಯ ದರ್ಶನ ಪಡೆದಿದ್ದಾರೆ ಎನ್ನಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close