ಕಾಫ್ ಸಿರಪ್ ದುರಂತ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ
Dinesh Gundu Rao: ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್ ಸಿರಪ್ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್ ಸಿರಪ್ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.