About Us Advertise with us Be a Reporter E-Paper

Breaking Newsದೇಶಪ್ರಚಲಿತ

ದೇವರ ನಾಡಿಗಿಲ್ಲ ವರುಣನ ಕರುಣೆ

ಹೆಚ್ಚಿದ ಮಳೆ, ಪ್ರವಾಹ

ತಿರುವನಂತಪುರಂ: ಕೇರಳದಲ್ಲಿ ಸುರಿಯುತ್ತಿರುವ ಮಹಾಮಳೆ ಕ್ಷಣ ಕ್ಷಣಕ್ಕೂ ತನ್ನ ರೌದ್ರಾವತಾರವನ್ನು ಹೆಚ್ಚಿಸುತ್ತಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ದೇವರನಾಡಿನಲ್ಲಿ ಮಳೆಯಿಂದಾಗಿ ಬರೊಬ್ಬರಿ 167 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸ್ವತಃ ಕೇರಳದ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ಮಾಹಿತಿ ನೀಡಿದ್ದು, ಗುರುವಾರದ ವೇಳೆಗೆ ಕೇರದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರು ಎಂದು ಹೇಳಲಾಗಿತ್ತು. ಇದೀಗ ಸಂಖ್ಯೆಯನ್ನು ಎಸ್‌ಟಿಆರ್‌ಎಫ್ ಪರಿಷ್ಕರಿಸಿದ್ದು, ಗುರುವಾರ ರಾತ್ರಿ ವೇಳೆಗೆ 100ಕ್ಕೂ ಅಧಿಕ ಮಂದಿ ಎಂದು ಮಾಹಿತಿ ನೀಡಿದೆ. ಇನ್ನು ಸಂತ್ರಸ್ತರ ರಕ್ಷಣೆಗೆ ಭಾರತೀಯ ಸೇನೆಯ ಕಾಲ್ದಳ, ವಾಯುದಳ ಮತ್ತು ನೌಕಾದಳಗಳ ಸಿಬ್ಬಂದಿಗಳು ನಿರಂತರವಾಗಿ ಶ್ರಮಿಸುತ್ತಿದ್ದರೂ, ಸಾವಿನ ಸಂಖ್ಯೆ ಮಾತ್ರ ದಿನೇ ದಿನೇ ಏರಿಕೆಯಾಗುತ್ತಲೇ ಇದೆ.

ಹೀಗಾಗಿ ಕೇರಳಕ್ಕೆ ಹೆಚ್ಚುವರಿಯಾಗಿ 43 ಎನ್‌ಡಿಆರ್‌ಎಫ್ ತಂಡಗಳನ್ನು ರವಾನೆ ಮಾಡಲಾಗಿದ್ದು, ಇದರ ಜೊತೆಗೆ 420 ಸಿಬ್ಬಂದಿಗಳು, 23 ಹೆಲಿಕಾಪ್ಟರ್‌ಗಳನ್ನು ಮತ್ತು 200 ಯಾಂತ್ರಿಕ ಬೋಟ್ ಗಳನ್ನು ಕೇರಳಕ್ಕೆ ರವಾನೆ ಮಾಡಲು ನಿರ್ಧರಿಸಲಾಗಿದೆ. ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೊಚ್ಚಿ ವಿಮಾನ ನಿಲ್ದಾಣ ಆಗಸ್‌ಟ್ 26ರವರೆಗೆ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಪ್ರವಾಹ ಪೀಡಿತ ಕೇರಳಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರಯಾಭ ಬೆಳೆಸಿದ್ದು, ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ತ್ರಿಶ್ಶೂರ್, ಅಲೂವಾ ಹಾಗೂ ಮೂವಾಟ್ಟುಫುಝಾದಲ್ಲಿ ಪ್ರವಾಹಕ್ಕೆ ಸಿಲುಕಿರುವ ಮನೆಯ ಮೇಲೆ ಜನರು ಕುಳಿತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಭಾರತೀಯ ನೌಕಾದಳದ ಸಿಬ್ಬಂದಿಗಳು ಜನರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

Tags

Related Articles

Leave a Reply

Your email address will not be published. Required fields are marked *

Language
Close