ಮಠಗಳ ಸುತ್ತಿದ ಎಚ್‌ ಡಿ ಕುಮಾರಸ್ವಾಮಿ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಎಚ್.ಡಿ.ಕುಮಾರಸ್ವಾಮಿ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಬಳಿಕ ಅಲ್ಲಿಂದ ನೇರವಾಗಿ ತುಮಕೂರಿನಲ್ಲಿರುವ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದರು. ಅದರಂತೆ ಪೊಲೀಸರ ಭದ್ರತೆಯಲ್ಲಿ ಇಂದು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.  ಇದಕ್ಕೂ ಮೊದಲು ಸಿಎಂ ಕುಮಾರಸ್ವಾಮಿಯವರು ಶ್ರೀ ನಂಜಾವದೂತ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಶ್ರೀಗಳು ಮಾಧ್ಯಮಗಳೊಂದಿಗೆ ಮಾತನಾಡಿ, ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿಗಾಗಿ ಸಿಎಂ ಆಗಿದ್ದಾರೆ ವಿನಃ ಅಧಿಕಾರದ ಆಸೆಯಿಂದಲ್ಲ ಎಂದರು.

ಕುಮಾರಸ್ವಾಮಿಯವರು ವ್ಯಕ್ತಿ ಅಲ್ಲ, ಒಂದು ಶಕ್ತಿ. ಎಲ್ಲ ವರ್ಗದ ಜನರೂ ಕುಮಾರಸ್ವಾಮಿವರ ಜೊತೆಗಿದ್ದಾರೆ. ಅವರಿಗೆ ತೊಂದರೆ ಕೊಡುವುದು ಬೇಡ. ಯಡಿಯೂರಪ್ಪ, ಪ್ರಧಾನಿ ಹಾಗೂ ಅಮಿತ್ ಶಾ ಅವರು ಕೂಡ ತೊಂದರೆ ಕೊಡುವುದು ಬೇಡ.ಆರು ತಿಂಗಳು ಕುಮಾರಸ್ವಾಮಿ ಏನು ಮಾಡುತ್ತಾರೆ ಎಂದು ಕಾದು ನೋಡಿ. ದೇವೇಗೌಡರ ಮಾರ್ಗದಲ್ಲಿ ಕುಮಾರಸ್ವಾಮಿ ನಡೆಯುತ್ತಾರೆ. 11 ತಿಂಗಳು ಪ್ರಧಾನಿಯಾಗಿ ಅನೇಕ ಕೆಲಸ ಮಾಡಿದ್ದಾರೆ. ಅವರ ಹಾದಿಯಲ್ಲಿ ಕೆಲಸ ಮಾಡಲು ಸಲಹೆ ಕೊಟ್ಟಿದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

16 + 16 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top