About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಲೋಕಸಭಾ ಚುನಾವಣೆಯಲ್ಲಿ ಮೊಮ್ಮಗನ ಸ್ಫರ್ಧೆ ಖಚಿತಪಡಿಸಿದ ಎಚ್‌ ಡಿ ದೇವೇಗೌಡ

ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಫರ್ಧೆ ಖಚಿತ ಎಂದು ಮಾಜಿ ಪ್ರಧಾನ ಮಂತ್ರಿ ಹಾಗು ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ತಿಳಿಸಿದ್ದಾರೆ.

ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ದೇವೇಗೌಡರು, “2019ರಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಖಚಿತ. ಆದರೆ ಯಾವ ಕ್ಷೇತ್ರದಲ್ಲಿ ಸ್ಫರ್ಧಿಸಬೇಕು ಎಂದು ಇನ್ನೂ ಖಚಿತಪಡಿಸಿಲ್ಲ” ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಪ್ರಜ್ವಲ್‌ ರೇವಣ್ಣ, “ಚುನಾಣೆಯಲ್ಲಿ ಸ್ಫರ್ಧಿಸುವುದಾದರೆ ಸ್ವಂತ ಊರು ಹಾಸನದಲ್ಲೇ ಸ್ಪರ್ಧಿಸುತ್ತೇನೆ. ಮಂಡ್ಯಕ್ಕೆ ಹೋಗುವ ಯಾವುದೇ ಪ್ರಶ್ನೆ ಇಲ್ಲ” ಎಂದು ತಿಳಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close