ಗೌರಿ ಹತ್ಯೆ ಹೋರಾಟ ವೇದಿಕೆಗೆ ಜನಸಾಗರ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಹೋರಾಟ ವೇದಿಕೆ ಆಯೋಜಿಸಿರುವ ’ನಾನೂ ಗೌರಿ’ ಪ್ರತಿರೋಧ ಸಮಾವೇಶಕ್ಕೆ ಜನಸಾಗರವೇ ಹರಿದು ಬಂದಿದೆ. ಕ್ರಾಂತಿಯ ಗೀತೆಗಳನ್ನು ಹಾಡುವ ಮೂಲಕ ರೈಲು ನಿಲ್ದಾಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭವಾಗಿದ್ದು, ಸೆಂಟ್ರಲ್ ಕಾಲೇಜ್ ಮೈದಾನದಲ್ಲಿ ಸಮಾವೇಶ ನಡೆಯಲಿದೆ.

ದೇಶ, ವಿದೇಶಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇಂಟರ್‌ನ್ಯಾಷನಲ್ ಯೂನಿಯನ್ ಆಫ್ ಪೀಪಲ್ಸ್ ನಾಯಕಿ ಗೇಬ್ರಿಯಲ್, ದಕ್ಷಿಣಾಯನದ ಡಾ.ಗಣೇಶ್ ಎನ್.ದೇವಿ, ತೀಸ್ತಾ ಸೆಟಲ್ ವಾಡ್, ಮೇಧಾ ಪಾಟ್ಕರ್, ಸ್ವಾಮಿ ಅಗ್ನಿವೇಶ್, ಸೀತಾರಾಂ ಯೆಚೂರಿ, ಜಿಘ್ನೇಶ್ ಮೇವಾನಿ ಸೇರಿ ದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ದೇಶದ ವಿವಿಧ ಕಡೆಗಳಿಂದಲೂ ಅಪಾರ ಸಂಖ್ಯೆಯ ಜನ ಆಗಮಿಸಿದ್ದು, ಗೌರಿ ಲಂಕೇಶ್ ಹಂತಕರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ’ನಾನೂ ಗೌರಿ’ ಘೋಷಣೆ ಮುಗಿಲು ಮುಟ್ಟಿದೆ.

One thought on “ಗೌರಿ ಹತ್ಯೆ ಹೋರಾಟ ವೇದಿಕೆಗೆ ಜನಸಾಗರ

Leave a Reply

Your email address will not be published. Required fields are marked *

thirteen + seven =

Wednesday, 24.01.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಸಪ್ತಮಿ, ಬುಧವಾರ, ನಿತ್ಯ ನಕ್ಷತ್ರ-ರೇವತಿ, ಯೋಗ-ಸಿದ್ಧಿ, ಕರಣ-ವಣಿಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

 

Wednesday, 24.01.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಸಪ್ತಮಿ, ಬುಧವಾರ, ನಿತ್ಯ ನಕ್ಷತ್ರ-ರೇವತಿ, ಯೋಗ-ಸಿದ್ಧಿ, ಕರಣ-ವಣಿಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

Back To Top