About Us Advertise with us Be a Reporter E-Paper

Breaking Newsದೇಶಪ್ರಚಲಿತ

ರಾಕ್ಷಸೀ ಮಳೆಗೆ ದೇವರ ನಾಡು ಗಢಗಢ..!

ತಿರುವನಂತಪುರಂ: ದೇವರ ನಾಡು ಕೇರಳದಲ್ಲಿ ಭಾರಿ ಮಳೆ ಹಲವು ಅನಾಹುತವನ್ನೇ ಸೃಷ್ಟಿಸಿದೆ. ನಿರಂತರವಾಗಿ ಸುರಿಯುತ್ತಿರುವ ರಾಕ್ಷಸೀ ಮಳೆಗೆ ಕೇರಳ ಜನತೆ ಬೆಚ್ಚಿಬಿದ್ದಿದ್ದಾರೆ.

40 ವರ್ಷದ ಬಳಿಕ ಇಡುಕ್ಕಿ ಜಲಾಶಯದ ಎಲ್ಲ ಗೇಟ್ ಗಳನ್ನು ತೆರೆಯಲಾಗಿದ್ದು, ನೀರು ಹೊರಬಿಡಲಾಗಿದೆ. ಪೆರಿಯಾರ್ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಎರ್ನಾಕುಲಂ ಜಿಲ್ಲೆಯಲ್ಲಿ ಸುಮಾರು ನಾಲ್ಕು ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳತ್ತ ರವಾನಿಸಲಾಗಿದ್ದು, ನಿರಾಶ್ರಿತರಿಗೆ ಗಂಜಿ ಕೇಂದ್ರ ತೆರೆಯಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೇರಳದ ಇಡುಕ್ಕಿ, ವೈನಾಡು, ತ್ರಿಶೂರ್, ಎರ್ನಾಕುಲಂ ಜಿಲ್ಲೆಯಲ್ಲಿ ವಿಪರೀತ ಮಳೆಗೆ ಜನ ನಲುಗಿ ಹೋಗಿದ್ದಾರೆ. ಮಳೆ ಜತೆಗೆ ಹಲವೆಡೆ ಭೂ ಕುಸಿತಗಳು ಉಂಟಾಗಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಪರಿಣಾಮ ಸುಮಾರು 26 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ.

ಇನ್ನು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್, ಹೆಲಿಕಾಪ್ಟರ್ ಮೂಲಕ ನೆರೆಪೀಡಿತ ಪ್ರದೇಶಗಳ ವೀಕ್ಷಿಸಲಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೇರಳಕ್ಕೆ ಕೇಂದ್ರದಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.

ಕೇರಳದ ಕಡೆ ಪ್ರವಾಸ ಮಾಡದಂತೆ ಕೇರಳ ಸರ್ಕಾರ ಪ್ರವಾಸಿಗರಿಗೆ ಸೂಚನೆ ನೀಡಿದೆ. ಇನ್ನು ಸಂತ್ರಸ್ತರ ನೆರವಿಗೆ ಎನ್ ಡಿಆರ್ ಎಫ್ ತಂಡ ಧಾವಿಸಿದ್ದು, ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

Tags

Related Articles

Leave a Reply

Your email address will not be published. Required fields are marked *

Language
Close