About Us Advertise with us Be a Reporter E-Paper

Breaking Newsರಾಜ್ಯ

ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ವಕೀಲರ ಸಂಘ ಆಗ್ರಹ

ಬೆಂಗಳೂರು; ಹೈಕೋರ್ಟ್‌ನಲ್ಲಿ ಖಾಲಿ ಇರುವ 29 ನ್ಯಾಯಮೂರ್ತಿಗಳ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ವಕೀಲರ ಸಂಘ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

ನ್ಯಾಯಮೂರ್ತಿ ಹುದ್ದೆಗಳ ಭರ್ತಿಗೆ ಪ್ರಧಾನ ಮಂತ್ರಿ, ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ, ಅಟಾರ್ನಿ ಜನರಲ್ ಮತ್ತು ಕೇಂದ್ರ ಕಾನೂನು ಸಚಿವರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಹಾಲಿ ಇರುವ ನ್ಯಾಯಮೂರ್ತಿಗಳ ಮೇಲೆ ಕೆಲಸದ ಒತ್ತಡ ಹೆಚ್ಚಾಗಿದೆ. ಕಕ್ಷಿದಾರರಿಗೆ ತ್ವರಿತ ನ್ಯಾಯ ಸಿಗುತ್ತಿಲ್ಲ. ಕಳೆದ ಮೇ ತಿಂಗಳಲ್ಲಿ ಕರ್ನಾಟಕ ಹೈಕೋರ್ಟ್‌ನ ಕೊಲಿಜಿಯಂ 9 ಮಂದಿ ವಕೀಲರ ಹೆಸರನ್ನು ನ್ಯಾಯಮೂರ್ತಿಗಳ ಹುದ್ದೆಗಳಿಗೆ ಶಿಫಾರಸು ಮಾಡಿದೆ. ಈ ಕಡತವನ್ನು ಕೇಂದ್ರ ಸರಕಾರದ ಬಾಕಿ ಉಳಿಸಿಕೊಂಡಿದ್ದು, ಶಿಫಾರಸು ಪಟ್ಟಿಗೆ ಆದಷ್ಟು ಬೇಗ ಅನುಮೋದನೆ ನೀಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

ಹೈಕೋರ್ಟ್‌ ನಲ್ಲಿ ಒಟ್ಟು 62 ನ್ಯಾಯಮೂರ್ತಿ ಹುದ್ದೆಗಳಿದ್ದು, ಸದ್ಯ 33 ನ್ಯಾಯಮೂರ್ತಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ಬೆಂಗಳೂರಿನ ಪ್ರಧಾನ ಪೀಠದಲ್ಲಿ 23, ಧಾರವಾಡದಲ್ಲಿ 6 ಹಾಗೂ ಕಲಬುರ್ಗಿಯಲ್ಲಿ 4 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಹೈಕೋರ್ಟ್‌ ಮುಂದೆ ಒಟ್ಟು 3.25 ಲಕ್ಷಕ್ಕೂ ಅಧಿಕ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಹೀಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ವಿವರಿಸಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close