About Us Advertise with us Be a Reporter E-Paper

Breaking Newsಪ್ರಚಲಿತಸಿನಿಮಾಸ್

ಬಾಡಿಗೆ ಪಾವತಿಸಿ, ಇಲ್ಲವೇ ಮನೆ ಖಾಲಿ ಮಾಡಿ: ಯಶ್ ತಾಯಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ನಟ ಯಶ್​​​ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ಆದೇಶವನ್ನು​ ಹೈಕೋರ್ಟ್ ಎತ್ತಿಹಿಡಿದಿದ್ದು ಯಶ್ ತಾಯಿ ಪುಷ್ಪ ಅವರಿಗೆ ಭಾರೀ ಹಿನ್ನಡೆಯಾಗಿದೆ. ಬಾಡಿಗೆ ಪಾವತಿಸಿ, ಇಲ್ಲವೇ ಮನೆ ಖಾಲಿ ಮಾಡಿ ಎಂದು  ಹೇಳಿದೆ.

ಕೆಳ ನ್ಯಾಯಾಲಯದ ಆದೇಶ ಎತ್ತಿಹಿಡಿದ ಹೈಕೋರ್ಟ್​ ಬಾಡಿಗೆ ಪಾವತಿಸಿ, ಇಲ್ಲವೇ ಮನೆ ಖಾಲಿ ಮಾಡಿ ಎಂದು ನಟ ಯಶ್​ ತಾಯಿಗೆ ಸೂಚಿಸಿದೆ. 23.27 ಲಕ್ಷ ರು. ಬಾಡಿಗೆ ಪಾವತಿಸುವಂತೆ ಸೂಚನೆ ನೀಡಿರುವ ನ್ಯಾಯಾಲಯ​​ ತಕ್ಷಣ ಪಾವತಿಸಿದರೆ ಮುಂದಿನ ಮಾರ್ಚ್​ 31ರ ವರೆಗೆ ಇರಬಹುದು. ಇಲ್ಲವಾದಲ್ಲಿ ಡಿಸೆಂಬರ್​​ಗೆ ಖಾಲಿ ಮಾಡುವಂತೆ ತಾಕೀತು ಮಾಡಿದೆ.

ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಶ್ ತಾಯಿ ಪುಷ್ಪಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಮುನಿ ಪ್ರಸಾದ್​ ಹಾಗೂ ಡಾ. ವನಜಾ ಅವರಿಗೆ ಸೇರಿದ ಮನೆಯಾಗಿದ್ದು, ಕತ್ರಿಗುಪ್ಪೆಯಲ್ಲಿದೆ. ಇದೇ ಮನೆಯಲ್ಲಿದ್ದಾಗ ಯಶ್​ ಸಾಕಷ್ಟು ಹಿಟ್ ಮೂವಿ ಕೊಟ್ಟಿದ್ದರು. ಹೀಗಾಗಿ ಅದೃಷ್ಟದ ಮನೆ ಎಂಬ ಕಾರಣಕ್ಕೆ ಮನೆ ಖಾಲಿ ಮಾಡಲು ನಿರಾಕರಿಸಿದ್ದರು

Tags

Related Articles

Leave a Reply

Your email address will not be published. Required fields are marked *

Language
Close