About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ದೆಹಲಿಯ ಹೋಟೆಲ್​ನಲ್ಲಿ ಅಗ್ನಿ ದುರಂತ: ಸಾವಿನ ಸಂಖ್ಯೆ 17ಕ್ಕೆ ಏರಿಕೆ

ದೆಹಲಿ: ಇಲ್ಲಿನ ಕರೋಲ್​ ಭಾಗ್​ನಲ್ಲಿರುವ ಹೋಟೆಲ್​ ಅರ್ಪಿತ್​ ಪ್ಯಾಲೇಸ್​ನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ 17 ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ಹೋಟೆಲ್​ನಲ್ಲಿ ಕೇರಳದ 10 ಜನರ ಕುಟುಂಬ ಕೂಡ ಇಲ್ಲಿ ವಾಸ್ತವ್ಯ ಹೂಡಿತ್ತು. ಇವರಲ್ಲಿ ಒಬ್ಬರು ಮಹಿಳೆ ಹಾಗೂ ಮಗು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದರು. ಇದೀಗ 17 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ಹೇಳಲಾಗಿದೆ. ಅಗ್ನಿಯ ಕೆನ್ನಾಲಿಗೆಯು ಹೋಟೆಲ್​ನ 40 ಕೊಠಡಿಗಳಿಗೂ ವ್ಯಾಪಿಸಿರುವ ಕಾರಣ ಸಾವು ನೋವು ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಅಗ್ನಿ ಅವಘಡದ  ಸುದ್ದಿ ಕೇಳಿ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈಗಾಗಲೆ ಹಲವರನ್ನು ರಕ್ಷಿಸಲಾಗಿದೆ.

ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಳಗ್ಗೆ 7 ಗಂಟೆಯಷ್ಟೊತ್ತಿಗೆ  ಹೋಟೆಲ್​ನ 40 ಕೋಣೆಗಳವರೆಗೆ ಭಾರಿ ಪ್ರಮಾಣದಲ್ಲಿ ಬೆಂಕಿ ಹಾಗೂ ಹೊಗೆ ಹರಡಿದೆ.

Tags

Related Articles

Leave a Reply

Your email address will not be published. Required fields are marked *

Language
Close