About Us Advertise with us Be a Reporter E-Paper

Breaking Newsದೇಶಪ್ರಚಲಿತ

ಅಕ್ರಮ ಆಸ್ತಿ ಸಂಪಾದನೆ: ತೆಲಂಗಾಣ ಜಿಲ್ಲಾ ನ್ಯಾಯಾಧೀಶರ ಬಂಧನ

ಹೈದರಾಬಾದ್: ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಜಿಲ್ಲಾ ನ್ಯಾಯಾಧೀಶ ವಿ. ವರಪ್ರಸಾದ್ ಅವರನ್ನು ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಡಿಯಲ್ಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ನಂತರ ಅವರನ್ನು ಸ್ಥಳಿಯ ನ್ಯಾಯಾಧೀಶರ ಎದುರು ಹಾಜರುಪಡಿಸಿ ವರಪ್ರಸಾದ್ ಅವರನ್ನು ಚಂಚಲಗುಡ ಜೈಲಿಗೆ ಕಳುಹಿಸಲಾಗಿದೆ. ಇವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರ ಆರೋಪದ ಪ್ರಕರಣ ದಾಖಲಿಸಲಾಗಿದೆ.

ಮಾರುಕಟ್ಟೆ ದರಕ್ಕಿಂತ ಸುಮಾರು 3 ಕೋಟಿ ರು. ಮೌಲ್ಯದ ಆಸ್ತಿಯನ್ನು ಹೊಂದಿರುವ ಆರೋಪದ ಅಡಿಯಲ್ಲಿ ವರಪ್ರಸಾದ್ ಅವರನ್ನು ಬಂಧಿಸಲಾಗಿದೆ. ಬುಧವಾರ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಅವರು ಅಕ್ರಮವಾಗಿ ಸಂಪಾದನೆ ಮಾಡಿರುವುದು ಪತ್ತೆಯಾಗಿತ್ತು.

Tags

Related Articles

Leave a Reply

Your email address will not be published. Required fields are marked *

Language
Close