About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಐಎಎಫ್ ಮಾಜಿ ಮುಖ್ಯಸ್ಥಎಸ್.ಪಿ.ತ್ಯಾಗಿಗೆ ಷರತ್ತುಬದ್ಧ ಜಾಮೀನು

ದೆಹಲಿ: ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣ ಸಂಬಂಧ ಐಎಎಫ್ ಮಾಜಿ ಮುಖ್ಯಸ್ಥ ಎಸ್.ಪಿ. ತ್ಯಾಗಿಗೆ ದೆಹಲಿ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಎಸ್.ಪಿ.ತ್ಯಾಗಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ನ ವಿಶೇಷ ನ್ಯಾಯಮೂರ್ತಿ ಅರವಿಂದ್ ಕುಮಾರ್, ಎಸ್.ಪಿ.ತ್ಯಾಗಿ ಮತ್ತು ಅವರ ಸಹೋದರ ಸಂಬಂಧಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದ್ದಾರೆ. ಎಲ್ಲ ಆರೋಪಿಗಳಿಗೂ ತಲಾ ಒಂದು ಲಕ್ಷ ರೂ. ಭದ್ರತಾ ಶೂರಿಟಿ ನೀಡಿ ಜಾಮೀನು ಪಡೆಯುವಂತೆ ಕೋರ್ಟ್ ಆದೇಶಿಸಿದೆ. ಅಲ್ಲದೆ ಮುಂದಿನ ವಿಚಾರಣೆಗಳಿಗೆ ಅಗತ್ಯಬಿದ್ದರೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕೋರ್ಟ್ ಆದೇಶಿಸಿದೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಈ ಹಿಂದೆ ಜುಲೈ 24 ರಂದು ಪ್ರಕರಣದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು.
Tags

Related Articles

Leave a Reply

Your email address will not be published. Required fields are marked *

Language
Close