About Us Advertise with us Be a Reporter E-Paper

Breaking Newsಕ್ರೀಡೆಪ್ರಚಲಿತ
Trending

ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ, ಬೂಮ್ರಾಗೆ ಅಗ್ರ ಸ್ಥಾನ

ದುಬೈ: ಐಸಿಸಿ ಬಿಡುಗಡೆ ಮಾಡಿರುವ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ವೇಗಿ ಜಸ್ಪ್ರೀತ್ ಬೂಮ್ರಾಗೆ ಅಗ್ರ ಸ್ಥಾನ ಲಭಿಸಿದೆ.

ಮಂಗಳವಾರ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ ಐಸಿಸಿ, 899 ಅಂಕಗಳೊಂದಿಗೆ ಕೊಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಭಾರತದ ಮತ್ತೊಬ್ಬ ಬ್ಯಾಟ್ಸ್ ಮನ್ ರೋಹಿತ್ ಶರ್ಮಾಗೆ 2ನೇ ಸ್ಥಾನ ಲಭಿಸಿದೆ. ಇನ್ನು ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಕೂಡ 8ನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಮೂವರು ಭಾರತೀಯ ಆಟಗಾರರು ಅಗ್ರ 10ರೊಳಗೆ ಸ್ಥಾನ ಪಡೆದಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 20ನೇ ಸ್ಥಾನದಲ್ಲಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮೂವರು ಬೌಲರ್ ಗಳು ಕೂಡ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಲಭಿಸಿವೆ. ವೇಗಿ ಜಸ್ಪ್ರೀತ್ ಬೂಮ್ರಾ 841 ಅಂಕಗಳೊಂದಿಗೆ ಅಗ್ರ ಸ್ಥಾನ ಪಡೆದಿದ್ದಾರೆ. ಕುಲ್ದೀಪ್ ಯಾದವ್‍ಗೆ 3ನೇ ಸ್ಥಾನ ಹಾಗೂ ಯಜುವೇಂದ್ರ ಚಹಾಲ್ 5ನೇ ಸ್ಥಾನ ಪಡೆದಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close