About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯಸಿನಿಮಾಸ್

ಮತ್ತೆ ವಿಚಾರಣೆಗೆ ಕರೆದರೆ ಖಂಡಿತ ಹಾಜರಾಗುತ್ತೇನೆ: ಕಿಚ್ಚ ಸುದೀಪ್

ಬೆಂಗಳೂರು: ಐಟಿ ದಾಳಿ ಬಳಿಕ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದ ಕಿಚ್ಚ ಸುದೀಪ್ ಇಂದು ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಐಟಿ ಅಧಿಕಾರಗಳು ಸರ್ಚ್ ಮಾಡಲು ಬರುವುದು ನಮ್ಮ ತಪ್ಪಿನಿಂದ. ತಪ್ಪೇ ಮಾಡದೆ ಆಮಂತ್ರಣ ಕೊಡಲು ಬರುವುದಿಲ್ಲ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಇದು ಎಚ್ಚರಿಕೆ ಅಷ್ಟೇ. ಈ ಘಟನೆಗಳಿಂದ ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳಬೇಕು. ಬೇರೆ ನಟರ ಮನೆ ಮೇಲೆ ದಾಳಿ ಹಾಗೂ ಹೇಳಿಕೆಗಳ ಬಗ್ಗೆ ನನಗೆ ಗೊತ್ತಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವುದರಿಂದ ಎಲ್ಲರೂ ನಮ್ಮನ್ನು ಪ್ರಶ್ನಿಸುತ್ತಾರೆ. ಉತ್ತರ ಕೊಡಲು ಹಿಂಜರಿದರೆ ತಪ್ಪು ಸಂದೇಶ ಹೋಗುತ್ತದೆ.

ಬೇರೆಯವರಿಗೆ ಏನು ಸಮಸ್ಯೆ ಆಗಿದೆ ನನಗೆ ಗೊತ್ತಿಲ್ಲ. ಅವರ ಸ್ಥಾನದಲ್ಲಿ ನಾನು ನಿಂತು ಹೇಳಲು ಸಾಧ್ಯವಿಲ್ಲ. ಅವರ ಸಮಸ್ಯೆ ಬಗ್ಗೆ ಅವರೇ ಹೇಳಬೇಕು. ನಾನು ನನ್ನ ಮನೆಯಲ್ಲಿ ನಡೆದ ಘಟನೆ ಬಗ್ಗೆ ಮಾತ್ರ ಹೇಳಬಲ್ಲೆ. ಮತ್ತೆ ವಿಚಾರಣೆಗೆ ಕರೆದರೆ ಖಂಡಿತ ಹಾಜರಾಗುತ್ತೇನೆ ಎಂದು ಸುದೀಪ್ ಹೇಳಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close