About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಉ.ಕರ್ನಾಟಕಕ್ಕೆ ಅನ್ಯಾಯವಾದಲ್ಲಿ ನಾನು ಸುಮ್ಮನಿರಲ್ಲ: ಶ್ರೀರಾಮಲು ಎಚ್ಚರಿಕೆ

ಬಳ್ಳಾರಿ: ಉತ್ತರ ಕರ್ನಾಟಕದ ರೈತರಿಗೆ ಹಾಗೂ ಈ ಭಾಗದ ಜನತೆಗೆ ಅನ್ಯಾಯವಾದರೆ ನಾನು ಸುಮ್ಮನಿರುವುದಿಲ್ಲ ಎಂದು ಶಾಸಕ ಶ್ರೀರಾಮುಲು ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದಿಂದ ಉತ್ತರ ಕರ್ನಾಟಕದ ಜನರಿಗೆ ಅನ್ಯಾಯವಾಗುತ್ತಿದೆ. ಅವರನ್ನು ನಿರ್ಲಕ್ಷಿಸುತ್ತಿದ್ದು, ನನ್ನ ಜನತೆಗೆ ಅನ್ಯಾಯವಾದಲ್ಲಿ ನಾನು ಸುಮ್ಮನಿರುವುದಿಲ್ಲ, ನಾನು ರಾಜೀನಾಮೆ ನೀಡಲು ಸಿದ್ಧ. ರಾಜ್ಯ ಸರಕಾರ ನಿರ್ಲಕ್ಷ್ಯ ಭಾವನೆ ತೋರುತ್ತಿರುವುದರಿಂದ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿದೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ದನಿಯಾಗುತ್ತೇನೆ, ಹಾಗೂ ನನ್ನ ಮುಂದಾಳತ್ವದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದರು

.ಉತ್ತರ ಕರ್ನಾಟಕದ ರೈತರ ಜತೆ ಸಿಎಂ ಅಸಭ್ಯವಾಗಿ ನಡೆದುಕೊಳ್ಳುವುದು ಸರಿಯಲ್ಲ. ಅವರ ಜತೆ ಸರಿಯಾಗಿ ನಡೆದುಕೊಳ್ಳಿ ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Tags

Related Articles

Leave a Reply

Your email address will not be published. Required fields are marked *

Language
Close