About Us Advertise with us Be a Reporter E-Paper

Breaking Newsದೇಶಪ್ರಚಲಿತ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕೇರಳಕ್ಕೆ ಪ್ರಧಾನಿ ಅಭಯ

ದೆಹಲಿ: 47ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರವಾಹದಿಂದ ತತ್ತರಿಸಿರುವ ಕೇರಳದ ಜತೆ ಇಡೀ ಭಾರತವಿದೆ ಎಂದು ಅಭಯ ನೀಡಿದರು.

ಕೇರಳ ಪ್ರವಾಹದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಜನರಿಗೆ ನಾವು ಸಂತಾಪವನ್ನು ವ್ಯಕ್ತಪಡಿಸುತ್ತೇವೆ, ಅಲ್ಲದೆ ಎಲ್ಲಾ ಹಂತಗಳ ಜನರೂ ಅವರನ್ನು ಬೆಂಬಲಿಸಲು ಮುಂದೆ ಬಂದಿದ್ದಾರೆ ಎಂದರು.

ನೈಸರ್ಗಿಕ ವಿಕೋಪದಲ್ಲಿ ರಕ್ಷಣಾ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿರುವ ಕೇಂದ್ರ ಪಡೆಗಳ ಪಾತ್ರವನ್ನು ಮೋದಿ ಪ್ರಶಂಸಿಸಿದರು. ಪ್ರವಾಹದಿಂದ ಸುಮಾರು 20,000 ಕೋಟಿ ನಷ್ಟವಾಗಿದೆ. ಹೀಗಾಗಿ  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 543 ಕೋಟಿ ರೂ.ಬಿಡುಗಡೆ ಮಾಡಿರುವುದಾಗಿ ಈ ವೇಳೆ ಮೋದಿ ಹೇಳಿದರು.

ಇನ್ನು ಮನ್ ಕಿ ಬಾತ್‍ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಪ್ರಸ್ತಾಪಿಸಿದ ಮೋದಿ, ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ಅಟಲ್ ಜೀ ಬಹಳ ವಿಭಿನ್ನ ಮತ್ತು ಧನಾತ್ಮಕ ಬದಲಾವಣೆಯನ್ನು ತಂದರು. ಸಮಾಜದ ಎಲ್ಲಾ ವಿಭಾಗಗಳಿಂದ ಅವರಿಗೆ ಗೌರವ ಸಂದಿದೆ ಎಂದರು. ಅಲ್ಲದೆ ಭಾರತೀಯ ಪ್ರಜಾಪ್ರಭುತ್ವಕ್ಕೆ ವಾಜಪೇಯಿ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.

ಇನ್ನು ಇದೇ ವೇಳೆ ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು. ‘ಭಾರತೀಯ ಆಟಗಾರರು ದೇಶಕ್ಕೆ ಪದಕಗಳನ್ನು ಗೆದ್ದು ತಂದಿದ್ದಾರೆ. ಏಷ್ಯನ್ ಗೇಮ್ಸ್ ಪದಕ ವಿಜೇತರ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ. ಮುಂಬರುವ ಕ್ರೀಡಾಕೂಟಕ್ಕೂ ಶುಭಾಶಯ ತಿಳಿಸುತ್ತೇನೆ. ದೇಶದ ಜನತೆ ಫಿಟ್‍ನೆಸ್ ಬಗ್ಗೆ ಕಾಳಜಿ ವಹಿಸುವಂತೆ ಮತ್ತೊಮ್ಮೆ ಕೇಳಿಕೊಳ್ಳುತ್ತೇನೆ’ ಎಂದು ಮೋದಿ ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close