About Us Advertise with us Be a Reporter E-Paper

Breaking Newsದೇಶಪ್ರಚಲಿತ

ಐಆರ್ ಸಿಟಿಸಿ ಹಗರಣ: ಲಾಲೂ ಪತ್ನಿ, ಪುತ್ರನಿಗೆ ಜಾಮೀನು

ದೆಹಲಿ: ಐಆರ್ ಸಿಟಿಸಿ ಹಗರಣ ಸಂಬಂಧ ಬಿಹಾರದ ಮಾಜಿ ಸಿಎಂ ರಾಬ್ರಿದೇವಿ ಹಾಗೂ ಪುತ್ರ ತೇಜಸ್ವಿ ಯಾದವ್‍ಗೆ ದೆಹಲಿ ಪಟಿಯಾಲ ಕೋರ್ಟ್ ಜಾಮೀನು ನೀಡಿದೆ.

2006ರಲ್ಲಿ ಭಾರತೀಯ ರೈಲ್ವೆಯ ಹೋಟೆಲ್ ಗಳ ಗುತ್ತಿಗೆ ನೀಡುವ ವಿಚಾರದಲ್ಲಿ ಅವ್ಯವಹಾರ ಎಸಗಿದ್ದ ಸಂಬಂಧ, ಲಾಲೂ ಕುಟುಂಬದ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್  ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಲಾಲೂಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ ಹಾಗೂ ಪುತ್ರ ತೇಜಸ್ವಿ ಯಾದವ್ ಅವರ ಹೆಸರು ಕೇಳಿಬಂದಿತ್ತು.

ಲಾಲೂ ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದಾಗ ರಾಂಚಿ ಮತ್ತು ಪುರಿಯಲ್ಲಿ ಐಆರ್ ಸಿಟಿಸಿ ಹೋಟೆಲ್ ನಿರ್ವಹಣೆಯ ಹೊಣೆಯನ್ನು ಖಾಸಗಿ ಕಂಪನಿಗಳಿಗೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಹುಕೋಟಿ ಅವ್ಯವಹಾರ ನಡೆದಿತ್ತು ಎನ್ನಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close