About Us Advertise with us Be a Reporter E-Paper

Breaking Newsದೇಶಪ್ರಚಲಿತ

ಜಮ್ಮು-ಕಾಶ್ಮೀರದಲ್ಲಿ ಸೇನೆ ಗುಂಡೇಟಿಗೆ ಒಬ್ಬ ಉಗ್ರ ಫಿನಿಶ್

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ನಿಂತಿಲ್ಲ. ಅನಂತ್‍ನಾಗ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ – ಭಯೋತ್ಪಾದರು ನಡೆಸಿದ ಗುಂಡಿನ ಕಾಳಗದಲ್ಲಿ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ. ಘಟನೆಯಲ್ಲಿ ಒಬ್ಬರು ಪೊಲೀಸ್‍ ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ವೇಳೆ ಉಗ್ರರು ದಾಳಿ ಮಾಡಿದ್ದು, ಈ ವೇಳೆ ಒಬ್ಬ ಎಲ್‍ಇಟಿ ಭಯೋತ್ಪಾದಕನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಹತ್ಯೆಯಾದ ಉಗ್ರನಿಂದ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿದೆ. ಗಾಯಾಳು ಪೊಲೀಸ್‍ನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

Tags

Related Articles

Leave a Reply

Your email address will not be published. Required fields are marked *

Language
Close