About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ರೆಡ್ಡಿ ಸುಳಿವು ಪತ್ತೆಯಿಲ್ಲ: ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ

ಬೆಂಗಳೂರು: ಆ್ಯಂಬಿಡೆಂಟ್‌ ಕಂಪನಿಯ ಮಾಲೀಕ ಸೈಯದ್‌ ಅಹಮದ್‌ ಫ‌ರೀದ್‌ ಬಳಿ 57 ಕೆ.ಜಿ ಚಿನ್ನದ ಗಟ್ಟಿ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ವಶಕ್ಕೆ ಪಡೆಯಲು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ನಾನಾ ಕಸರತ್ತು ನಡೆಸುತ್ತಿದ್ದರೂ, ಇದುವರೆಗೂ ರೆಡ್ಡಿಯ ಸಣ್ಣ ಸುಳಿವು ಪತ್ತೆಯಾಗಿಲ್ಲ.

ತಲೆಮರೆಸಿಕೊಂಡಿರುವ ರೆಡ್ಡಿಗಾಗಿ ಸಿಸಿಬಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹೀಗಾಗಿ ಜನಾರ್ದನ ರೆಡ್ಡಿ ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಇಂದು ನಗರದ ಸೆಷನ್ಸ್ ಕೋರ್ಟ್​ನಲ್ಲಿ ರೆಡ್ಡಿ ಪರ ವಕೀಲ ಚಂದ್ರಶೇಖರ್ ಅರ್ಜಿ ಸಲ್ಲಿಸಲಿದ್ದಾರೆ. ಸದ್ಯ ಅಜ್ಞಾತ ಸ್ಥಳದಲ್ಲಿ ಇದ್ದುಕೊಂಡೇ ಜಾಮೀನಿಗೆ ಹರಸಾಹಸಪಡ್ತಿರೋ ರೆಡ್ಡಿಗಾಗಿ ಸಿಸಿಬಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸಿದ್ದಾರೆ.

ಈ ನಡುವೆ ಬಳ್ಳಾರಿಯಲ್ಲಿರುವ ಜನಾರ್ದನ ರೆಡ್ಡಿ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close